ಸಿಇಟಿ-ಸಕ್ಷಮ್”ಕಾರ್ಯಕ್ರಮ ರಾಜ್ಯಕ್ಕೆ ಮಾದರಿ
ಬೆಳಗಾವಿ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯಗಳ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳನ್ನು ನೀಟ್-ಜೆಇಇ ಸ್ಪರ್ಧಾತ್ಮಕ ಪರೀಕ್ಷೆಗೆ ಅಣಿಗೊಳಿಸುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಆರಂಭಿಸಲಾಗಿರುವ “ಸಿಇಟಿ-ಸಕ್ಷಮ್” ಕಾರ್ಯಕ್ರಮವು ಇಡೀ ರಾಜ್ಯಕ್ಕೆ ಮಾದರಿಯಾಗಿ ಹೊರಹೊಮ್ಮಿದೆ! ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ಶಿಂಧೆ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ಪರೀಕ್ಷೆಗಳ ಕುರಿತು ಅಧ್ಯಯನಕ್ಕಾಗಿ ಶಿವಮೊಗ್ಗ ಜಿಲ್ಲೆಯ ತಂಡವು ಜಿಲ್ಲೆಗೆ ಆಗಮಿಸಿರುತ್ತದೆ. ಬೆಳಗಾವಿ ಜಿಲ್ಲೆಯ ಉಪ ನಿರ್ದೇಶಕರ ಕಾರ್ಯಾಲಯ ಪ.ಪೂ ಶಿಕ್ಷಣ ಇಲಾಖೆ ಬೆಳಗಾವಿ ಕಚೇರಿಯಲ್ಲಿ “ಸಿಇಟಿ-ಸಕ್ಷಮ್ ಕಾರ್ಯಕ್ರಮದ ಕಾರ್ಯವಿಧಾನವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಅಳವಡಿಸಿಕೊಳ್ಳುವ…
