ಶಾಂತಿ, ಸೌಹಾರ್ದತೆಯಿಂದ ಗಣೇಶ ಹಬ್ಬ ಆಚರಿಸಬೇಕು: ಪಿಎಸ್‌ಐ ಬಿ.ಆನಂದ
ಬೆಟಗೇರಿ ಗ್ರಾಮದ ಸರ್ವ ಧರ್ಮಿಯರು ಶಾಂತಿ, ಸ್ನೇಹ, ಸೌಹಾರ್ದತೆಯಿಂದ ಗಣೇಶ ಹಬ್ಬವನ್ನು ಆಚರಿಸಬೇಕು ಎಂದು ಕುಲಗೋಡ ಪೊಲೀಸ್ ಠಾಣೆಯ ಪಿಎಸ್‌ಐ ಬಿ. ಆನಂದ ಹೇಳಿದರು.ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆ, ಕುಲಗೋಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ಆ.30 ರಂದು ನಡೆದ ಶಾಂತಿಪಾಲನಾ ಸಭೆಯಲ್ಲಿ ಮಾತನಾಡಿದರು.ಗಣೇಶ ಹಬ್ಬವನ್ನು ಸ್ಥಳೀಯರು ದುಂದು ವೆಚ್ಚ ಮಾಡಿ ಆಚರಿಸುವ ಬದಲು ಸಂಕಷ್ಟದಲ್ಲಿರುವ ಬಡವರಿಗೆ, ಅನಾಥಾಶ್ರಮದ ಮಕ್ಕಳಿಗೆ ಸಹಾಯ ಮಾಡಲು ಮುಂದಾಗಬೇಕು….
