ಸೆ.15 ರಂದು 145 ಕಿ.ಮೀ.ಮಾನವ ಸರಪಳಿ; ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾರ್ಗ ಪರಿಶೀಲನೆ
ಬೆಳಗಾವಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಭಾರತ ದೇಶದ ಪ್ರಜಾಪ್ರಭುತ್ವ, ಸಂವಿಧಾನದ ಮಹತ್ವವನ್ನು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಇದೇ ಸೆ.15. ರಂದು ಜಿಲ್ಲೆಯಲ್ಲಿ ನಡೆಯಲಿರುವ 145 ಕಿ.ಮೀ. ಉದ್ದದ ಬೃಹತ್ ಮಾನವ ಸರಪಳಿ ಕಾರ್ಯಕ್ರಮದ ಯಶಸ್ಸಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಅವರೊಂದಿಗೆ ಮಾನವ ಸರಪಳಿಯ ಮಾರ್ಗವನ್ನು ಶುಕ್ರವಾರ ಪರಿಶೀಲಿಸಿದರು….
