ಶೌಚಾಲಯ ನಿರ್ಮಿಸಿ ಇಲ್ಲವೇ ನಿರ್ಮಿಸಲು ಅವಕಾಶ ಕೊಡಿ: ಕನ್ನಡ ಸೇನೆ ಒತ್ತಾಯ
ಕೋಲಾರ.01: ನಗರದ ಕೋಲಾರಮ್ಮ ದೇವಾಲಯ ಹಾಗೂ ಸೋಮೇಶ್ವರ ದೇವಾಲಯಗಳಿಗೆ ಬರುವ ಭಕ್ತರು ಮತ್ತು ಪ್ರವಾಸಿಗರಿಗೆ ಶೌಚಾಲಯ ವ್ಯವಸ್ಥೆ ಇಲ್ಲದೇ ಪರದಾಡುವಂತಾಗಿದ್ದು ಕೊಡಲೇ ಎರಡು ದೇವಾಲಯಗಳಲ್ಲಿ ಸುಸಜ್ಜಿತವಾದ ಶೌಚಾಲಯ ನಿರ್ಮಾಣ ಮಾಡುವಂತೆ ಕನ್ನಡ ಸೇನೆ ಮುಖಂಡರು ಜಿಲ್ಲಾಧಿಕಾರಿ ಆಕ್ರಂಪಾಷ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಕನ್ನಡಮಿತ್ರ ವೆಂಕಟಪ್ಪ ಕೋಲಾರ ನಗರದ ಅಧಿದೇವತೆ ಕೋಲಾರಮ್ಮ ದೇವಾಲಯ ಹಾಗೂ ಶಿಲ್ಪಕಲೆಯ ಸೊಬಗನ್ನು ಹೊಂದಿರುವ ಸೋಮೇಶ್ವರ ದೇವಾಲಯವನ್ನು ವೀಕ್ಷಿಸಲು ಪ್ರತಿನಿತ್ಯ ಸಾವಿರಾರು…
