ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ಎರಡು ದಿನಗಳ ‘ಅಂತರ್‌ವಿಭಾಗೀಯ ಯುವಜನೋತ್ಸವ
ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಎರಡು ದಿನಗಳ ‘ಅಂತರ್‌ವಿಭಾಗೀಯ ಯುವಜನೋತ್ಸವ-2024’ ಕಾರ್ಯಕ್ರಮಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಮಾಜಿ ಅಧ್ಯಕ್ಷರು ಹಾಗೂ ಸಾಹಿತಿಗಳಾದ ಸಿದ್ದರಾಮ ಕಲ್ಮಠ ಚಾಲನೆ ನೀಡಿ ಅವರು ಮಾತನಾಡಿದರು.ಪ್ರಪಂಚದಲ್ಲಿ ವಿಶಿಷ್ಟವಾದ ಸಾಂಸ್ಕೃತಿಕ ನೆಲೆಗಟ್ಟುಗಳನ್ನು ಭಾರತದಲ್ಲಿ ಮಾತ್ರ ಕಾಣಬಹುದಾಗಿದೆ. ವಿದ್ಯಾರ್ಥಿಗಳು ಸಾಂಸ್ಕೃತಿಕ ಮನೋಭಾವನೆಯಿಂದಾಗಿ ಸಮಾಜದಲ್ಲಿ ಸ್ಥಿರವಾಗಿ ನಿಲ್ಲುತ್ತಾರೆ ಎಂದು ಅವರು ಅಭಿಪ್ರಾಯ ಪಟ್ಟರು.ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಜೆ.ತಿಪ್ಪೇರುದ್ರಪ್ಪ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಜನಪದ ಕಲೆಗಳು ಕಾಣಸಿಗುವುದು ಹಳ್ಳಿಗಳಲ್ಲಿ ಮಾತ್ರ. ವಿದ್ಯಾರ್ಥಿಗಳು ಅಂತರ್ಜಾಲ ಬಳಕೆಯನ್ನು…
