ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯ ಪ್ರತಿಮೆ ಲೋಕಾರ್ಪಣೆ
ಬೆಳಗಾವಿ ಬ್ರಿಟೀಷರ ವಿರುದ್ಧ ರಣಕಹಳೆ ಮೊಳಗಿಸಿದ ಸ್ವಾತಂತ್ರ್ಯ ಹೋರಾಟಗಾರ ಹಾಗೂ ವೀರ ಸೇನಾನಿ ಸಂಗೊಳ್ಳಿ ರಾಯಣ್ಣ ಸೇರಿದಂತೆ ಒಟ್ಟು ಏಳು ಜನರನ್ನು ನಂದಗಡದಲ್ಲಿ ನೇಣಿಗೆ ಹಾಕಲಾಗಿದೆ. ರಾಯಣ್ಣ ಸಮಾಧಿ ಸ್ಥಳವನ್ನು ಅಭಿಪಡಿಸಿದಂತೆ ಉಳಿದ ಆರು ಹುತಾತ್ಮರ ಸಮಾಧಿ ಸ್ಥಳಗಳನ್ನು ಕೂಡ ಅಭಿವೃದ್ಧಿ ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿದರು. ನಂದಗಡ ರೂರಲ್ ಎಜುಕೇಷನ್ ಸೊಸೈಟಿ ಮೈದಾನದಲ್ಲಿ ಸೋಮವಾರ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯ, ಸಮಾಧಿ ಬಳಿಯ ಕೆರೆಯಲ್ಲಿ ಕ್ರಾಂತಿವೀರ ರಾಯಣ್ಣ ಪ್ರತಿಮೆ ಲೋಕಾರ್ಪಣೆಗೊಳಿಸಿ ಹಾಗೂ…
