ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ, ನೀರಿನ ಸಮಗ್ರ ನಿರ್ವಹಣೆ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ
ರಾಜ್ಯ ಸರಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭೂಮಿ ಜೀವದ ತೊಟ್ಟಿಲು, ಇಂತಹ ಜೀವದ ತೊಟ್ಟಿಲನ್ನು ಬಂಜೆ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಬೆಳಗಾವಿ ತಾಲೂಕಿನ ಹುದಲಿ ಗ್ರಾಮದಲ್ಲಿನ ಬೆಳಗಾಂ ಶುಗರ್ಸ ಹತ್ತಿರ ಖಾಸಗಿ ಜಮೀನಿನಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ ಬೆಳಗಾವಿ, ಕೃಷಿ ಇಲಾಖೆ ಹಾಗೂ ಸಕ್ಕರೆ ಕಾರ್ಖಾನೆಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಜರುಗಿದ ಬೆಳಗಾವಿ, ಬಾಗಲಕೋಟ, ವಿಜಯಪುರ, ಕಲಬುರಗಿ ಮತ್ತು…
