ಬೆಟಗೇರಿ ಪ್ರೌಢ ಶಾಲೆಯಲ್ಲಿ ನೂತನ ಶಾಲಾ ಕೊಠಡಿಗಳಿಗೆ ಭೂಮಿಪೂಜೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಡಿ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ನ.೧೨ರಂದು ನೂತನ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ಕಾರ್ಯಕ್ರಮ ನಡೆಯಿತು.ಬೆಳಗಾವಿ ಜಿಲ್ಲಾ ಪಂಚಾಯತ, ಚಿಕ್ಕೋಡಿ ಪಂಚಾಯತ ರಾಜ್ ಇಂಜನೀಯರಿಂಗ್ ವಿಭಾಗ ಹಾಗೂ ಗೋಕಾಕ ಸಹಾಯಕ ಕಾರ್ಯಕಾರಿ ಅಭಿಯಂತರರು ಪಂಚಾಯತ ರಾಜ್ ಇಂಜನೀಯರಿಂಗ್ ಉಪವಿಭಾಗದ ಸಹಯೋಗದಲ್ಲಿ ಸನ್೨೦೨೨-೨೩ನೇ ಸಾಲಿನ ಕೇಂದ್ರ ಯೋಜನಾ ಅನುಮೋದನಾ ಮಂಡಳಿ(ಪಿಎಬಿ)ವಾರ್ಷಿಕ ಕ್ರೀಯಾ ಯೋಜನೆಯಡಿಯ ಸುಮಾರು ೬೭ ಲಕ್ಷ ರೂ.ಗಳ ಅನುದಾನದಡಿಯಲ್ಲಿ ನೂತನ ೪ ಶಾಲಾ ಕೊಠಡಿ ನಿರ್ಮಾಣ ಮಾಡಲಾಗುವುದು…
