ಬೆಣ್ಣೆ ಹಳ್ಳ ಪ್ರವಾಹ ಹಾನಿ ಪ್ರದೇಶ ವೀಕ್ಷಣೆ ಮಾಡಿದ ಸಚಿವ ಸಂತೋಷ ಲಾಡ್.
ಕಳೆದ ನಾಲ್ಕೈದು ದಿನಗಳಿಂದ ಸುರಿದ ಮಳೆಯಿಂದಾಗಿ ನವಲಗುಂದ ತಾಲೂಕಿನಲ್ಲಿ ತುಪ್ಪರಿ ಹಳ್ಳ ಹಾಗೂ ಬೆಣ್ಣಿ ಹಳ್ಳದ ಪ್ರವಾಹದಿಂದ ಹಾನಿಗೊಳಗಾದ ಗ್ರಾಮಗಳಾದ ಹನಸಿ, ಶಿರಕೋಳ, ಬಳ್ಳೂರ ಗ್ರಾಮಗಳಿಗೆ ಸಚಿವರಾದ ಸಂತೋಷ ಲಾಡ್, ಶಾಸಕರಾದ ಎನ್.ಎಚ್.ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಭೇಟಿ ನೀಡಿ ಸ್ಥಿತಿಗತಿ ಪರಿಶೀಲಿಸಿದರು. ಇನಾಮಹೊಂಗಲ್, ಹನಸಿ ಹಾಗೂ ಶಿರಕೋಳ, ಬಳ್ಳೂರ ಗ್ರಾಮಗಳಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದರು. ಹನಸಿ ಗ್ರಾಮದಲ್ಲಿ ಲಲಿತಾ ಗಂಗಪ್ಪ ಹೆಬ್ಬಳ್ಳಿ, ಗುರಪಾದಪ್ಪ ರುದ್ರಪ್ಪ ಆಯೆಟ್ಟಿ ಹಾಗೂ ಬಸವರಾಜ ಚಂದ್ರಶೇಖರ ಇಂಡಿ…
