ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಖೆ ಸಂಯುಕ್ತಾಶ್ರಯದಲ್ಲಿ ಜರುಗಿದ ಡಿ.ದೇವರಾಜ ಅರಸು ರವರ 109ನೇ ಜನ್ಮ ದಿನಾಚರಣೆ
ಬೆಳಗಾವಿ ನಗರದ ಕುಮಾರ ಗಂಧರ್ವ ರಂಗಂಮದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಖೆ ಸಂಯುಕ್ತಾಶ್ರಯದಲ್ಲಿ ಜರುಗಿದ ಡಿ.ದೇವರಾಜ ಅರಸು ರವರ 109ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ರಾಜ್ಯ ಸಭಾ ಸದಸ್ಯರಾದ ಈರಣ್ಣ ಕಡಾಡಿ ಉದ್ಘಾಟಿಸಿ ಅವರು ಮಾತನಾಡಿದರು. ಡಿ.ದೇವರಾಜ ಅರಸು ಅವರು ತಮ್ಮ ಮುಖ್ಯಮಂತ್ರಿಗಳ ಆಡಳಿತಾವಧಿಯಲ್ಲಿ ಶೋಷಿತರನ್ನು ಮುಖ್ಯವಾಹಿನಿಗೆ ತರುವಲ್ಲಿ ಎಲ್ಲ ವಿರೋಧಗಳನ್ನು ಮೀರಿ ಪ್ರಯತ್ನಿಸಿ ತಮ್ಮ ಛಾಪನ್ನು ಮೂಡಿಸಿದ್ದರು ಎಂದರು. ಅರಸುರವರು ಸಮಾಜದ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಅನೇಕ ಕ್ರಾಂತಿಕಾರಿಕ…
