ದೇವಸ್ಥಾನ ಉದ್ಘಾಟನೆ ಹಾಗೂ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾನ ಸಮಾರಂಭದ ಹಿನ್ನೆಲೆ 11 ದಿನಗಳ ವ್ರತ ಕೈಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನೂತನ ದೇವಸ್ಥಾನ ಉದ್ಘಾಟನೆ ಹಾಗೂ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾನ ಸಮಾರಂಭದ ಹಿನ್ನೆಲೆ 11 ದಿನಗಳ ವ್ರತ ಕೈಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಮೋದಿ. ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರಾಣ ಪ್ರತಿಷ್ಠೆಗೆ ಕೇವಲ 11 ದಿನಗಳು ಉಳಿದಿವೆ. ಈ ಶುಭ ಸಮಾರಂಭಕ್ಕೆ ಸಾಕ್ಷಿಯಾಗುವ ಸೌಭಾಗ್ಯ ನನ್ನದು. ಸಮಾರಂಭದಲ್ಲಿ ಭಾರತದ ಜನರನ್ನು ಪ್ರತಿನಿಧಿಸಲು ಭಗವಂತ ನನ್ನನ್ನು ಕೇಳಿದ್ದಾನೆ. ಅದನ್ನು ಗಮನದಲ್ಲಿಟ್ಟುಕೊಂಡು ನಾನು…
