ನಿವೇಶನ ನೀಡಬೇಕೆಂದು ಆಗ್ರಹಿಸಿ ಜನಪರ ಟ್ರಸ್ಟ್ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ರಾಮದುರ್ಗ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಬಡ ಕೂಲಿಕಾರ್ಮಿಕರಿಗೆ ನಿವೇಶನ ಹಂಚಿಕೆ ಮಾಡುವಂತೆ ಆಗ್ರಹಿಸಿ ಜನಪರ ಟ್ರಸ್ಟ್ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪುರಸಭೆ ಮುಂದೆ ಧರಣಿ ನಡೆಸಿ, ಪುರಸಭೆ ಮುಖ್ಯಾಧಿಕಾರಿಗಳ ಮೂಲಕ ಬೈಲಹೊಂಗಲ ಉಪ ವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಕಳೆದ 14 ವರ್ಷಗಳಿಂದ ಅರ್ಜಿ ಸಲ್ಲಿಸಿದ ನಿವೇಶನ ರಹಿತ ಬಡವರಿಗೆ ಇಲ್ಲಿಯ ವರೆಗೂ ಯಾವುದೇ ನಿವೇಶನ ಹಂಚಿಕೆ ಮಾಡಿರುವುದಿಲ್ಲ ರಾಮದುರ್ಗ ತಾಲೂಕಿನ ರಂಕಲಕೊಪ್ಪ ಗ್ರಾಮದಲ್ಲಿ ಹಿಂದಿನ ಪುರಸಭೆ ಅಧ್ಯಕ್ಷ ಸುರೇಶ ಪತ್ತೇಪೂರ 5 ಎಕರೆ…
