ಜನರ ಬಳಿಗೆ ಸರಕಾರ; ನನ್ನ ಆದ್ಯತೆ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಜನರು ಸರಕಾರವನ್ನು ಹುಡುಕಬಾರದು; ಜನರ ಬಳಿಗೆ ಸರಕಾರ ಇರಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು, ಗ್ರಾಮಲೆಕ್ಕಾಧಿಕಾರಿಗಳು ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಕೇಂದ್ರ ಸ್ಥಾನದಲ್ಲಿದ್ದುಕೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಗುರುವಾರ(ಜು.9) ಜರುಗಿದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಎಲ್ಲ ಇಲಾಖೆಗಳ ಜಿಲ್ಲಾಮಟ್ಟದ, ತಾಲ್ಲೂಕುಮಟ್ಟದ ಪ್ರತಿ ಅಧಿಕಾರಿಯು ಕೇಂದ್ರಸ್ಥಾನದಲ್ಲಿರುವ ಬಗ್ಗೆ ಡಿಸಿ, ಸಿಇಓಗಳು ಖಚಿತಪಡಿಸಿಕೊಳ್ಳಬೇಕು. ಚಲನವಲನ…
