ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಕಾಮಗಾರಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಪರಿಶೀಲಿಸಿದರು.
ಬೆಳಗಾವಿ ನಂದಗಡದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯದಲ್ಲಿ ಮಂಗಳವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಕಾಮಗಾರಿ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಮಾತನಾಡಿದರು. ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಹಾಗೂ ನಂದಗಡ ಮ್ಯೂಸಿಯಂ ಸೇರಿ ಒಟ್ಟು 261 ಕೋಟಿ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. 59 ಕೋಟಿ ವೆಚ್ಚದಲ್ಲಿ ಒಟ್ಟು 13 ಎಕರೆ ಜಾಗೆಯಲ್ಲಿ ನಂದಗಡ ಮ್ಯೂಸಿಯಂ…
