ಭಕ್ತ ಶ್ರೇಷ್ಠ ಕನಕದಾಸ ಜಯಂತಿಆಕರ್ಷಕ ಮೆರವಣಿಗೆಗೆ ಶಾಸಕ ಆಸೀಫ ಸೇಠ ಚಾಲನೆ ನೀಡಿದರು.
ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಭಕ್ತ ಶ್ರೇಷ್ಠ ಕನಕದಾಸ ಜಯಂತಿಯನ್ನು ಮಹಾನಗರ ಪಾಲಿಕ ಉಪ ಆಯುಕ್ತರಾದ ಉದಯಕುಮಾರ ಅವರು ಉದ್ಘಾಟಿಸಿ ಅವರು ಮಾತನಾಡಿದರು. ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಲೋಕಕ್ಕೆ ದಾಸಶ್ರೇಷ್ಠ ಕನಕದಾಸರ ಕೊಡುಗೆ ಅಪಾರವಾದುದು. ಕನಕದಾಸರ ಜಯಂತಿಯನ್ನು ಭಕ್ತಿಪೂರ್ವಕವಾಗಿ, ಅಭಿಮಾನಪೂರ್ವಕವಾಗಿ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಸಾಂಸ್ಕೃತಿಕ ಲೋಕಕ್ಕೆ ಅವರ ಕೊಡುಗೆಯು ದೊಡ್ಡ ಪ್ರಮಾಣದಲ್ಲಿ ಆಧ್ಯಾತ್ಮಿಕ…
