ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ
1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ವಿಶೇಷ ಕಾರ್ಯಕ್ರಮವನ್ನು ಮುಖ್ಯಮಂತ್ರಿಯವರು 2024-25ನೇ ಸಾಲಿನ ಬಜೆಟ್‍ನಲ್ಲಿ ಘೋಷಿಸಿದ್ದಾರೆ. “ಗಾಂಧೀ ಭಾರತ” ಹೆಸರಿನಲ್ಲಿ ವರ್ಷವಿಡೀ ರಾಜ್ಯದಾದ್ಯಂತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಬೆಳಗಾವಿಯಲ್ಲಿ ಬರುವ ಡಿಸೆಂಬರ್‍ನಲ್ಲಿ ನಡೆಯುವ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಅಮೇರಿಕದ ಮಾಜಿ ಅಧ್ಯಕ್ಷರಾದ ಬರಾಕ್ ಓಬಾಮಾ ಅವರನ್ನು ಆಹ್ವಾನಿಸುವ ಚಿಂತನೆ ನಡೆದಿದೆ ಎಂದು ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ ಹೇಳಿದರು….
