ಬಸಿಡೋನಿ ಗ್ರಾಮದಲ್ಲಿ ಹದಗೆಟ್ಟ ರಸ್ತೆ : ಯಾಮಾರಿದರೆ ಯಮಲೋಕ ದರ್ಶನ
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಗೊರಬಾಳ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬಸಿಡೋನಿ ಗ್ರಾಮದಲ್ಲಿ ರಸ್ತೆ ತುಂಬ ಗುಂಡಿಮಯ ಯಾಮಾರಿದರೆ ಯಮಲೋಕ ದರ್ಶನ ಗ್ಯಾರಂಟಿ ಗ್ರಾಮದ ಕೆಲ ಪ್ರಮುಖ ರಸ್ತೆಗಳು ಸೇರಿದಂತೆ ಒಳ ರಸ್ತೆಗಳಲ್ಲಿ ರಸ್ತೆಗಳನ್ನು ಹುಡುಕಿ ವಾಹನ ಸಂಚಾರ ಮಾಡಬೇಕಾದ ಪರಿಸ್ಥಿತಿ ಇದೆ. ರಸ್ತೆ ಹಾಳಾಗಿ ವರ್ಷಗಳೇ ಕಳೆದರೂ ದುರಸ್ತಿಗೆ ಅಧಿಕಾರಿಗಳು ಇನ್ನೂ ಮನಸ್ಸು ಮಾಡಿಲ್ಲ. ಹೀಗಾಗಿ ರಸ್ತೆ ಮಧ್ಯೆ ದೊಡ್ಡ ಗುಂಡಿಗಳು ನಿರ್ಮಾಣವಾಗಿ ಸಂಚಾರಕ್ಕೆ ಅಸಾಧ್ಯದ ಪರಿಸ್ಥಿತಿ ತಂದೊಡ್ಡಿವೆ. ನೀರು ರಸ್ತೆಯಲ್ಲೇ ನಿಲ್ಲುತ್ತಿದೆ. ರಸ್ತೆಗಳು ತೀವ್ರ…
