ಪ್ರೆಸ್ ಕ್ಲಬ್ ಹಾಗೂ ವಿಜಯ ಸೇನೆ ಸಹಯೋಗದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ವಿರಕ್ತಮಠ ಟ್ರಸ್ಟ್ ಅಧ್ಯಕ್ಷ ಪ್ರದೀಪ ಪಟ್ಟಣ ಉದ್ಘಾಟಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಪ್ರೆಸ್ ಕ್ಲಬ್ ರಾಮದುರ್ಗ ಹಾಗೂ ವಿಜಯ ಸೇನಾ ಸಮಿತಿ ಸಹಯೋಗದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ವಿರಕ್ತಮಠ ಟ್ರಸ್ಟ್ ಅಧ್ಯಕ್ಷ ಪ್ರದೀಪ ಪಟ್ಟಣ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಪ್ರಜಾಪ್ರಭುತ್ವದ ನಾಲ್ಕನೇಯ ಅಂಗವಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕಾ ರಂಗ ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ತರ ಕೊಡುಗೆ ನೀಡಿದೆ. ಹರ್ಮನ್ ಮೊಗ್ಲಿಂಗ್ ಅವರಿಂದ ಸ್ಥಾಪಿತವಾದ ಮಂಗಳೂರು ಸಮಾಚಾರ ಕನ್ನಡ ಮೊದಲು ಪತ್ರಿಕೆಯಾಗಿದೆ ಜುಲೈ 1 ರಂದು…
