BREAKING NEWS

ಯುವ ಜನತೆ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ: ಬಳ್ಳಾರಿ ಲೋಕಾಯುಕ್ತ ಎಸ್‌ಪಿ ಸಿದ್ಧರಾಜು

ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 15ನೇ ಸಂಸ್ಥಾಪನಾ ದಿನ-2024ರ ಪೂರ್ವ ದಿನದಂದು ಬಳ್ಳಾರಿ ಯುವ ರೆಡ್ ಕ್ರಾಸ್ ಘಟಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ವಿವಿಯ ರಾಷ್ಟ್ರೀಯ ಸೇವಾ ಯೋಜನೆ ಮತ್ತು ವಿದ್ಯಾರ್ಥಿ ಕಲ್ಯಾಣ ಘಟಕ ವತಿಯಿಂದ ಶುಕ್ರವಾರ ಆಯೋಜಿಸಿದ್ದ ‘ ಸ್ವಯಂ ರಕ್ತದಾನ ಶಿಬಿರ ಹಾಗೂ ಆರೋಗ್ಯ ತಪಾಸಣೆ’ ಕಾರ್ಯಕ್ರಮಕ್ಕೆ ಲೋಕಾಯುಕ್ತ ಎಸ್‌ಪಿ ಸಿದ್ಧರಾಜು ಚಂದ್ರಪ್ಪ ಚಾಲನೆ ನೀಡಿ ಅವರು ಮಾತನಾಡಿದರು.ರಕ್ತದಾನಕ್ಕಿಂತ ಶ್ರೇಷ್ಟ ದಾನ ಮತ್ತೊಂದಿಲ್ಲ, ಮಾನವಿಯತೆಗಾಗಿ ರಕ್ತದಾನ ಮಾಡಿದಲ್ಲಿ ನಮ್ಮಲ್ಲಿ ನವಚೈತನ್ಯ ಹುಟ್ಟುತ್ತದೆ…

Read More

ನದಿಪಾತ್ರದ ಜನರು ಎಚ್ಚರವಹಿಸುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ

ಬಳ್ಳಾರಿ ತುಂಗಭದ್ರಾ ಜಲಾಶಯವು ಬಹುತೇಕ ಭರ್ತಿಯಾಗಿದ್ದು, ಜಲಾಶಯಕ್ಕೆ ಹೆಚ್ಚಿನ ಒಳಹರಿವು ಇದೆ. ಈಗಾಗಲೇ ತುಂಗಭದ್ರಾ ನದಿಗೆ ನೀರು ಹರಿಸಲಾಗುತ್ತಿದ್ದು, ನದಿ ಪಾತ್ರದ ಜನರು ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. ಕಂಪ್ಲಿಯ ಕೋಟೆ ಪ್ರದೇಶದ ಬಳಿಯ ಪ್ರವಾಹ ಹಿನ್ನಲೆ ಭೇಟಿ ನೀಡಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ ಗುರುವಾರ ಸಂಜೆ ಸಾಕಷ್ಟು ಪ್ರಮಾಣದ ನೀರನ್ನು ಹೊರಬಿಡಲಾಗಿದೆ. ಜಿಲ್ಲೆಯ ಕಂಪ್ಲಿ ಮತ್ತು ಸಿರುಗುಪ್ಪ ತಾಲ್ಲೂಕು…

Read More

ಖಾನಾಪೂರ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿದರು.

ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಠಿ/ಪ್ರವಾಹ ಸಂಭವನೀಯ ಹಿನ್ನಲೆಯಲ್ಲಿ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಶುಕ್ರವಾರ ಖಾನಾಪೂರ ತಾಲೂಕಿನ ಪ್ರವಾಹ ಪೀಡಿತ, ಮಳೆ ಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಾಂಬೋಟಿ ರಸ್ತೆಯ ಕುಸುಮಳ್ಳಿ‌ ಸೇತುವೆ, ವೀಕ್ಷಿಸಿ, ಬಳಿಕ ಖಾನಾಪುರದಿಂದ ಜಾಂಬೋಟಿಗೆ ಸಂಪರ್ಕ ಕಲ್ಪಿಸುವ ಮದ್ಯದಲ್ಲಿ ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯ ಸ್ಥಿತಿಗತಿಯನ್ನು ಪರಿಶೀಲಿಸಿದರು. ಮಲಪ್ರಭಾ ನದಿತೀರದ ಹಿರೇಹಟ್ಟಿಹೊಳಿ ಗ್ರಾಮದ ಜನರು ಸಚಿವರನ್ನು ಭೇಟಿ ಮಾಡಿ ಮಾತನಾಡಿದರು ಪ್ರತಿವರ್ಷ ಮಳೆಗಾಲದಲ್ಲಿ…

Read More

ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ‌ ಪ್ರಾಧಿಕಾರದ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ವಹಿಸಿ ಮಾತನಾಡಿದರು.

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ಜರುಗಿದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ‌ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನದಿತೀರದ ಗ್ರಾಮಗಳ ಕುರಿತು ತಹಶೀಲ್ದಾರರಿಂದ ಮಾಹಿತಿಯನ್ನು ಪಡೆದುಕೊಂಡ ಜಿಲ್ಲಾಧಿಕಾರಿಗಳು, ಪ್ರವಾಹ ಬಾಧಿತಗೊಳ್ಳಲಿರುವ ಕೃಷ್ಣಾ, ಮಲಪ್ರಭಾ ಹಾಗೂ ಘಟಪ್ರಭಾ ನದಿತೀರದ ಗ್ರಾಮಗಳಲ್ಲಿ ತಹಶೀಲ್ದಾರರು, ನೋಡಲ್ ಅಧಿಕಾರಿಗಳು, ಅಗ್ನಿಶಾಮಕ ಮತ್ತು ಪೊಲೀಸ್ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು ಎಂದು ತಿಳಿಸಿದರು. ಮಂಗಾವತಿ, ಜುಗೂಳ, ಶಿರಗುಪ್ಪಿ, ಕುಸನಾಳ, ಬಳಜಿವಾಡ, ಮುಳವಾಡ, ಉಗಾರ್, ಯಡೂರ, ಮಾಂಜರಿ, ತಂಗಡಗಿ, ಶಿನಾಳ, ಝಂಜರವಾಡ, ಸತ್ತಿ,…

Read More

ಕಡ್ಡಾಯವಾಗಿ ನೀರಿನ ಗುಣ ಮಟ್ಟ ಪರೀಕ್ಷೆ ಮಾಡಿ: ಜಿ.ಪಂ. ಸಿ.ಇ.ಓ.ರಾಹುಲ್ ಶಿಂಧೆ ಸೂಚನೆ

ಬೆಳಗಾವಿ ಜಿಲ್ಲಾ ಪಂಚಾಯತ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ವೀಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಎಫ್.ಟಿ,ಕೆ ಕಿಟ್ ಬಳಕೆ ಮಾಡಿ ನೀರಿನ ಗುಣ ಮಟ್ಟ ಪರೀಕ್ಷೆ ಮಾಡಿ ವರದಿಯನ್ನು ಕಡ್ಡಾಯವಾಗಿ ನೀಡುವುದು. ಬಹುಗ್ರಾಮ ಕುಡಿಯುವ ನೀರು ಸರಬರಾಜು ಬಗ್ಗೆ ದಿನಾಲೂ ಚಾಲ್ತಿಯಲ್ಲಿರುವ, ಸ್ಥಗಿತಗೊಂಡಿರುವ ಹಾಗೂ ಸ್ಥಗಿತಗೊಂಡಿರುವುದಕ್ಕೆ ಕುಡಿಯುವ ನೀರಿಗೆ ಪರ್ಯಾಯ ಮಾರ್ಗದ ಬಗ್ಗೆ ವರದಿ ಮಾಡಬೇಕೆಂದು ಸಹಾಯಕ ಕಾರ್ಪಾಲಕ ಅಭಿಯಂತರರು ಮತ್ತು ಕಾರ್ಯಪಾಲಕ…

Read More

ಆತ್ಮಹತ್ಯೆ ಮಾಡಿಕೊಂಡ ನೇಕಾರ ಕುಟುಂಬಗಳಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ ನೇಕಾರರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ನೇಕಾರರ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ನೇಕಾರ ಆತ್ಮಹತ್ಯೆ ಪೈಲ್‌ಗಳು ಕೇವಲ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ಗೆ ಸಿಮೀತವಾಗಿವೆ. ಸರಕಾರ ಮಾತ್ರ ಬಡ ನೇಕಾರರಿಗೆ ಪರಿಹಾರ ನೀಡುತ್ತಿಲ್ಲ. ನೇಕಾರರು ಸಾಲದ ಮೇಲೆ ಸಾಲ ಮಾಡಿ ಜೀವನ ನಡೆಸುವದೇ ದುಸ್ಥರವಾಗಿದೆ. ಸಾಲಭಾದೆಗೆ ದಿಕ್ಕು ತೋಚದಂತಾಗಿ ಆತ್ಮಹತ್ಯೆಗಳು ನಡೆಯುತ್ತಲಿವೆ.ಜವಳಿ ಮಾರುಕಟ್ಟೆ ಕುಸಿತ ಹಾಗೂ ಕಚ್ಚಾ ನೂಲಿನ ಬೆಲೆ ಏರಿಕೆಯಿಂದ ಬಡ ನೇಕಾರ ಕುಟುಂಬಗಳು ತತ್ತರಿಸಿ ಹೋಗಿದ್ದು, ಅಲ್ಲದೇ…

Read More

ಧನಲಕ್ಷ್ಮಿ ಸಕ್ಕರೆ ಕಾರ್ಖಾನೆ ಶೇರುದಾರರಿಗೆ ಆ.1 ರಿಂದ 15 ರವರೆಗೆ ರಿಯಾತಿ ದರದಲ್ಲಿ ಸಕ್ಕರೆ ವಿತರಣೆ ಮಾಡಲಾಗುವದು ಎಂದು ಧನಲಕ್ಷ್ಮಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ ಹೇಳಿದರು.

ರಾಮದುರ್ಗ ಪಟ್ಟಣದ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಗಸ್ಟ್ 1 ರಿಂದ 15 ರವರೆಗೆ ರಿಯಾತಿ ದರದಲ್ಲಿ ಸಕ್ಕರೆ ವಿತರಣೆ ಮಾಡಲಾಗುವುದು ಅ ವರ್ಗದ ಶೇರುದಾರರಿಗೆ ರೂ.2200 ದರದಲ್ಲಿ ಒಂದು ಕ್ವಿಂಟಲ್, ಡ ವರ್ಗದ ಶೇರುದಾರರಿಗೆ ರೂ. 1100ದರದಲ್ಲಿ 50 ಕೆಜಿ ಸಕ್ಕರೆ ವಿತರಣೆ ಮಾಡಲಾಗುತ್ತಿದೆ. ರವಿವಾರ ಹೊರತು ಪಡಿಸಿ, ಪ್ರತಿದಿನ ಮುಂಜಾನೆ 10 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಕಾರ್ಖಾನೆ ಆವಣದಲ್ಲಿ ಸಕ್ಕರೆ ವಿತರಿಸಲಾಗುತ್ತಿದ್ದು, ಶಾಂತಯುತವಾಗಿ ಸಕ್ಕರೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು.ಶೇರುದಾರ ಸದಸ್ಯರು ಮರಣ…

Read More

ಭಾರತೀಯ ಮಜ್ದೂರ್ ಸಂಘದ 70ನೇ ವರ್ಷದ ವಾರ್ಷಿಕೋತ್ಸವ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಭಾರತಿಯ ಮಜ್ದೂರ್ ಸಂಘದ ಸಮಿತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಭಾರತೀಯ ಮಜ್ದೂರ್ ಸಂಘವು 70ನೇ ವಾರ್ಷಿಕೋತ್ಸವ ದಿನಾಚರಣೆಯನ್ನು ಬಹಳ ಅದ್ದೂರಿಯಿಂದ ಜಿಲ್ಲಾ ಸಮಿತಿ ಹಾಗೂ ರಾಮದುರ್ಗದ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಭಾರತಿ ಮಜ್ದೂರ್ ಸಂಘದ ಕಚೇರಿ ಯಲ್ಲಿ ಎಲ್ಲ ಪದಾಧಿಕಾರಿಗಳು ಹಾಗೂ ಎಲ್ಲಾ ಕಾರ್ಮಿಕ ಮುಖಂಡರು ಕಾರ್ಮಿಕರು ಸೇರಿಆಚರಣೆ ಮಾಡಲಾಯಿತುಈ ಸಂದರ್ಭದಲ್ಲಿ ರಾಜ್ಯದ ಸಂಘಟನಾ ಕಾರ್ಯದರ್ಶಿ ಶ್ರೀಯುತ ಪ್ರಶಾಂತ ಎಚ್ ಕಲಾದಗಿ ಅವರ ಸಂಘಟನೆ ಕುರಿತು ಹಾಗೂ ಸ್ಥಾಪನಾ…

Read More

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ 10 ಲಕ್ಷ ನಗದು ಹಣ ಜಪ್ತಿ ಮಾಡಿದ ಪೊಲೀಸರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಚೆಕ್‌ಪೋಸ್ಟನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ 10 ಲಕ್ಷ ನಗದು ಹಣ ಜಪ್ತಿ ಮಾಡಿದ ಪೊಲೀಸರು. ನಿಪ್ಪಾಣಿ ತಾಲೂಕಿನಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುವ ವಿಠಲ್ ಢವಳೇಶ್ವರ ಎಂಬುವರ ಕಾರಿನಲ್ಲಿ ಬೆಳಗಾವಿಯಿಂದ ಬಾಗಲಕೋಟೆಗೆ ಹಣ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ರಾಮದುರ್ಗ ಡಿವೈಎಸ್‌ಪಿ ಎಂ.ಪಾಂಡುರಂಗಯ್ಯ ನೇತೃತ್ವದಲ್ಲಿ ದಾಳಿಮಾಡಿ ಈ ಪ್ರಕರಣವನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆವರ್ಗಾವಣೆ ಮಾಡಲಾಗಿದೆ ಈ ವೇಳೆ ಸಿಪಿಐ ಹಾಯ್ ಆರ್ ಪಟ್ಟಣಶೆಟ್ಟಿ, ಪಿಎಸ್ಐ…

Read More

ನಾಡ ವಿರೋಧಿ ಉದ್ಯಮಿಗಳ ವಿರುದ್ಧ  ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳ ಉದ್ಯೋಗ ಮೀಸಲಾತಿ ನೀಡುವ ವಿಧೇಯಕವನ್ನು ವಿರೋಧಿಸುತ್ತಿರುವ ನಾಡ ವಿರೋಧಿ ಉದ್ಯಮಿಗಳ ವಿರುದ್ಧ  ಪಟ್ಟಣದ ಶ್ರೀ ಲಕ್ಷ್ಮಿ ವೆಂಕಟೇಶ್ ದೇವಸ್ಥಾನ ದಿಂದ ತಾಲೂಕಾ ಆಡಳಿತ ಸೌಧದ ವರೆಗೆ. ಪ್ರತಿಭಟನೆ ನಡೆಸಿ ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ 50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ…

Read More