BREAKING NEWS

ರಾಮದುರ್ಗ ಅಗ್ನಿಶಾಮಕದ ನೂತನ ಕಟ್ಟಡವನ್ನು ವಿಧಾನಸಭೆಯ ಮುಖ್ಯ ಸಚೇತ ಅಶೋಕ,ಮ ಪಟ್ಟಣ ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಅಗ್ನಿಶಾಮಕ ಠಾಣೆಗೆ ನೂತನವಾಗಿ ನಿರ್ಮಿಸಿದ ಕಟ್ಟಡವನ್ನು ವಿಧಾನಸಭೆಯ ಮುಖ್ಯ ಸಚೇತಕರಾದ ಅಶೋಕ,ಮ ಪಟ್ಟಣ ಉದ್ಘಾಟಿಸಿ ಮಾತನಾಡಿದ ಅವರು, ಇಲಾಖೆಯ ಸಿಬ್ಬಂದಿ ದಿನದ 24 ಘಂಟೆಗಳ ಕಾಲ ಸಂಪೂರ್ಣ ಜಾಗೃತರಾಗಿರಬೇಕು. ಅಗ್ನಿ ಅವಘಡಗಳು ನಡೆಯುವುದಕ್ಕೆ ಸಮಯ ಸಂದರ್ಭಗಳು ಇರುವುದಿಲ್ಲ. ತಮ್ಮ ಕಾರ್ಯಾಲಯಕ್ಕೆ ಕರೆ ಬಂದ ತಕ್ಷಣ ಆದಷ್ಟು ಬೇಗ ಸ್ಥಳಕ್ಕೆ ಆಗಮಿಸಿದಲ್ಲಿ ಮಾತ್ರ ಅಧಿಕ ಅನಾಹುತ ತಪ್ಪಿಸಲು ಸಾಧ್ಯವಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಅಗ್ನಿಶಾಮಕ ಠಾಣೆಯ…

Read More

ಬಸವನ ಬಾಗೇವಾಡಿ ತಾಲೂಕಿನ ಮುತ್ತಗಿ ಗ್ರಾಮದಿಂದ ಗೊಳಸಂಗಿಗೆ ಹೋಗುವ ಮಾರ್ಗಮಧ್ಯದಲ್ಲಿ ಸರ್ಕಾರಿ ಸ್ವಾಮ್ಯದ (MSIL) ಮಧ್ಯದ ಅಂಗಡಿಯಲ್ಲಿ ಹಗಲು ದರೋಡೆ

ಬಸವನ ಬಾಗೇವಾಡಿ ತಾಲೂಕಿನ ಮುತ್ತಗಿ ಗ್ರಾಮದಿಂದ ಗೊಳಸಂಗಿಗೆ ಹೋಗುವ ಮಾರ್ಗಮಧ್ಯದಲ್ಲಿ ಸರ್ಕಾರಿ ಸ್ವಾಮ್ಯದ ಎಂ ಎಸ್ ಐ ಎಲ್ ಮಳಿಗೆಯೊಂದು ಹಲವು ವರ್ಷಗಳಿಂದ ಬರೀ ಮಾರಾಟ ಮಾತ್ರವಲ್ಲದೆ ಪಕ್ಕದಲ್ಲಿಯೇ ಕುಡಿಸಲು ಎಲ್ಲಾ ರೀತಿಯ ವ್ಯವಸ್ಥೆಯನ್ನು ಕೂಡ ಇಲ್ಲಿ ಮಾಡಲಾಗಿದೆ. ಹೀಗಾಗಿ ಅಕ್ಕಪಕ್ಕದ ಗ್ರಾಮಗಳ ಕುಡುಕರ ಪಾಲಿಗೆ ಸ್ವರ್ಗವಾಗಿ ಕಾಣುತ್ತಿದೆ. ಆದರೆ, ಈ ಅಂಗಡಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಮಾತ್ರ ನರ ರಾಕ್ಷಸರಾಗಿ ಕುಡುಕರ ಪ್ರಾಣ ಹಿಂಡುವ ವಿಷ ಜಂತುಗಲಾಗಿದ್ದಾರೆ. ಅದು ಹೇಗೆ ಅಂತೀರಾ, ಹಾಗಿದ್ದರೆ, ಇಲ್ಲಿನ ವಿಡಿಯೋ…

Read More

ರಾಮದುರ್ಗ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳಿಗೆ ವಿಧಾನಸಭೆಯ ಮುಖ್ಯ ಸಚೇತಕರಾದ ಅಶೋಕ,ಮ ಪಟ್ಟಣ 16 ಲ್ಯಾಪ್ ಟಾಪ್ ವಿತರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕ ಆಡಳಿತ ರಾಮದುರ್ಗ, ಕಂದಾಯ ಇಲಾಖೆ ವತಿಯಿಂದ ರಾಮದುರ್ಗ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳಿಗೆ ವಿಧಾನಸಭೆಯ ಮುಖ್ಯ ಸಚೇತಕ ಅಶೋಕ,ಮ ಪಟ್ಟಣ ಅವರು 16 “ಲ್ಯಾಪ್ ಟಾಪ್” ವಿತರಿಸಿ ಮಾತನಾಡಿದರು ರಾಜ್ಯ ಸರ್ಕಾರದ ಎಲ್ಲಾ ತಂತ್ರಾಂಶಗಳನ್ನು ಲ್ಯಾಪ್ ಟಾಪ್ ನಲ್ಲಿ ಅಳವಡಿಸಿಕೊಂಡು ಸಾರ್ವಜನಿಕರಿಗೆ ನೇರವಾಗಿ ಗ್ರಾಮ ಮಟ್ಟದಲ್ಲಿ ತ್ವರಿತವಾಗಿ ಸೇವೆ ನೀಡುವಂತೆ ಕರೆ ನೀಡಿದೆ. ಈ ಸಂಧರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ಪ್ರಕಾಶ ಹೊಳೆಪ್ಪಗೋಳ ಹಾಗೂ ತಾಲೂಕಾ…

Read More

ಸರಕಾರದ‌ ಎರಡು ವರ್ಷಗಳ ಸಾಧನಾ ಸಂಭ್ರಮ

ಬೆಳಗಾವಿ, ಕರ್ನಾಟಕ ಸರಕಾರ ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಸಾಧನಾ ಸಂಭ್ರಮದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಬೆಳಗಾವಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿರುವ ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯಗಳ ಕುರಿತ ಮಾಹಿತಿ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೇ ಸರಕಾರದ ಇತರೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿಯನ್ನು ನೀಡಲು ರಾಜ್ಯದಾದ್ಯಂತ ಮಹಾನಗರ ಪಾಲಿಕೆಗಳ…

Read More

ಸವದತ್ತಿ ಎಲ್ಲಮ್ಮ ಕ್ಷೇತ್ರದ ಸಮಗ್ರ ಅಭಿವೃದ್ಧಿ ಯೋಜನೆ-ಪ್ರಗತಿ ಪರಿಶೀಲನೆ

ಬೆಳಗಾವಿ ಜಿಲ್ಲೆ ಸವದತ್ತಿ ಎಲ್ಲಮ್ಮ ಗುಡ್ಡದಲ್ಲಿ ಪ್ರತಿವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡುವ ಸುಪ್ರಸಿದ್ಧ ಸುಕ್ಷೇತ್ರ ಮೂಲಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಲು ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು ಕಾನೂನು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸವದತ್ತಿ ಎಲ್ಲಮ್ಮ ಗುಡ್ಡದ ಸಮಗ್ರ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದಂತೆ ಶುಕ್ರವಾರ ಪ್ರವಾಸಿಮಂದಿರದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೂರು ಕೋಟಿ ರೂಪಾಯಿ ವಿಶೇಷ…

Read More

ಜಿಲ್ಲಾ ಬಾಲಕಾರ್ಮಿಕರ ಯೋಜನೆ: ಕಾರ್ಯಕಾರಿ ಸಮಿತಿ ಸಭೆ

ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಜರಗಿದ ಜಿಲ್ಲಾ ಬಾಲ ಕಾರ್ಮಿಕರ ಯೋಜನಾ ಸಂಸ್ಥೆಯ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ವಹಿಸಿ ಅವರು ಮಾತನಾಡಿದರು. ಕಳೆದ ಮೂರು ವರ್ಷಗಳಿಂದ ಮಕ್ಕಳ ರಕ್ಷಣಾ ಸಹಾಯವಾಣಿಗೆ ಕಡಿಮೆ ಕರೆಗಳು ಬರುತ್ತಿದ್ದು, ಲೋಪದೋಷಗಳನ್ನು ಪರಿಶೀಲಿಸಿ ಕರೆ ಬಾರದಿರುವುದಕ್ಕೆ ಸೂಕ್ತ ಕಾರಣಗಳನ್ನು ಗುರುತಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು. ಬಾಲಕಾರ್ಮಿಕರ ಮುಕ್ತ ಜಿಲ್ಲೆ ಘೋಷಣೆಗೆ ಎಲ್ಲ ಸಂಬಂಧಿಸಿದ ಅಧಿಕಾರಿಗಳು ಜಂಟಿ ಸಮೀಕ್ಷೆಯಲ್ಲಿ ಭಾಗಿಯಾಗಿ ರಕ್ಷಣೆ ಮುಂದಾಗಬೇಕು. ಬಾಲಕಾರ್ಮಿಕರ ರಕ್ಷಣೆಗೆ ಸಾರ್ವಜನಿಕರು…

Read More

ಜಿ.ಪಂ., ತಾಪಂ. ಅನುದಾನ ಬಳಸಿಕೊಂಡು ಜುಲೈ 15 ರೊಳಗೆ ಎಲ್ಲ ಶಾಲಾ ಕೊಠಡಿ ದುರಸ್ತಿ ಮಾಡಿ, ಜಿ.ಪಂ. ಸಿಇಓ ಭುವನೇಶ ಪಾಟೀಲ

ಮಳೆಗಾಲದಲ್ಲಿ ಜಿಲ್ಲೆಯ ಯಾವುದೇ ಶಾಲೆಯಲ್ಲಿ ಮಕ್ಕಳ ಪಾಠಕ್ಕೆ ತೊಂದರೆ ಉಂಟಾದರೆ ಆಯಾ ತಾಲೂಕಿನ ಬಿಇಓ, ಡಿಡಿಪಿಐ ಅವರನ್ನು ಜವಾಬ್ದಾರಿಗೊಳಿಸಿ, ಕ್ರಮಕೈಗೊಳ್ಳಲಾಗುವುದು. ಎಲ್ಲ ಕ್ಷೇತ್ರಶಿಕ್ಷಣಾಧಿಕಾರಿಗಳು ಪ್ರತಿ ಶಾಲೆಗೆ ಭೇಟಿ ನೀಡಿ, ವಾಸ್ತವಿಕ ವರದಿ ಪಡೆದು, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಹೇಳಿದರು. ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶಾಲಾ ಕಟ್ಟಡಗಳ ಕಾಮಗಾರಿ ಹಾಗೂ ಕೊಠಡಿಗಳ ದುರಸ್ತಿ ಕುರಿತು ಶಿಕ್ಷಣ ಇಲಾಖೆ ಹಾಗೂ ವಿವಿಧ ಅನುಷ್ಠಾನ ಏಜನ್ಸಿಗಳ…

Read More

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ನ್ಯಾಯಾಧೀಶರ ವಸತಿ ಗೃಹದ ಆವರಣದಲ್ಲಿ “ವಿಶ್ವ ಪರಿಸರ ದಿನಾಚರಣೆ” ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು.

Read More

60 ವರ್ಷ ಸೇವೆ ಸಲ್ಲಿಸಿದ ಅಡುಗೆ ಸಿಬ್ಬಂದಿಗಳಿಗೆ ಅಭಿನಂದನಾ ಪತ್ರ ವಿತರಿಸಿದ ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ, “ಪ್ರಧಾನ ಮಂತ್ರಿ ಪೋಷನ್ ಶಕ್ತಿ ನಿರ್ಮಾಣ ಅಭಿಯಾನ” (ಮಧ್ಯಾಹ್ನ ಉಪಹಾರ ಯೋಜನೆ) ಅಡಿಯಲ್ಲಿ ಸುಮಾರು 20 ವರ್ಷಗಳವರೆಗೆ “ಅಡುಗೆದಾರರಾಗಿ” ಸೇವೆ ಸಲ್ಲಿಸಿ, 60 ವರ್ಷ ಪೂರ್ಣಗೊಂಡ ಆಯ್ದ ಸಿಬ್ಬಂದಿಗಳಿಗೆ ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಅಭಿನಂದನಾ ಪ್ರಮಾಣ ಪತ್ರವನ್ನು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ವಿತರಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರದ ಆದೇಶದ ಅನ್ವಯ 60ವರ್ಷ ಮಿರಿದ ಅಡುಗೆ ಸಿಬ್ಬಂದಿಯವರಿಗೆ ಈ ಹಿಂದೆ ಯಾವುದೇ ಆರ್ಥಿಕ ಸೌಲಭ್ಯವನ್ನು ನೀಡುತ್ತಿರಲಿಲ್ಲ. ಪ್ರಪ್ರಥಮವಾಗಿ ಕರ್ನಾಟಕದಲ್ಲಿ…

Read More

ಸವದತ್ತಿ ತಾಲೂಕಿನ 13 ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಹಾಗೂ ತಾಲೂಕು ಆಡಳಿತ ಸವದತ್ತಿ, ವಾರ್ಷಿಕ ಇಲಾಖೆ ವತಿಯಿಂದ ಸವದತ್ತಿ ತಾಲೂಕಿನ ಒಟ್ಟು 13 ಗ್ರಾಮ ಆಡಳಿತ ಅಧಿಕಾರಿಗಳ ಶಾಸಕ ವಿಶ್ವಾಸ ವಸಂತ ವೈದ್ಯ ಅವರು “ಲ್ಯಾಪ್ ಟಾಪ್” ವಿತರಿಸಿದ ರಾಜ್ಯ ಸರ್ಕಾರದ ಎಲ್ಲಾ ತಂತ್ರಾಂಶಗಳನ್ನು ಲ್ಯಾಪ್ ಟಾಪ್ ನಲ್ಲಿ ಅಳವಡಿಸಿಕೊಂಡು ಸಾರ್ವಜನಿಕರಿಗೆ ನೇರವಾಗಿ ಗ್ರಾಮ ಮಟ್ಟದಲ್ಲಿ ತ್ವರಿತವಾಗಿ ಸೇವೆ ನೀಡುವಂತೆ ಕರೆ ನೀಡಿದರು. ಈ ಸಂಧರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ಮಲ್ಲಿಕಾರ್ಜುನ್ ಹೆಗನ್ನವರ್ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು,…

Read More