ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆ ಜಾರಿ: ಕನ್ನಡಿಗರಿಗೆ ಸಿಕ್ಕ ಜಯ ಕನ್ನಡಮಿತ್ರ ವೆಂಕಟಪ್ಪ
ಕೋಲಾರ: ಖಾಸಗಿ ಕ್ಷೇತ್ರದ ಕಂಪನಿಗಳು, ಕಾರ್ಖಾನೆಗಳು, ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿರುವುದು ಏಳು ಕೋಟಿ ಕನ್ನಡಿಗರ ಗೆಲುವಾಗಿದೆ ಎಂದು ಕನ್ನಡ ಸೇನೆ ಜಿಲ್ಲಾಧ್ಯಕ್ಷ ಕನ್ನಡಮಿತ್ರ ವೆಂಕಟಪ್ಪ ಹೇಳಿದ್ದಾರೆ. ಈ ಕುರಿತು ಪತ್ರಿಕೆ ಹೇಳಿಕೆ ನೀಡಿರುವ ಅವರು ‘ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರ ಉದ್ಯಮ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡುವ ಕರ್ನಾಟಕ ರಾಜ್ಯ ಉದ್ಯೋಗ ಮಸೂದೆ 2024 ಗುರುವಾರ ವಿಧಾನಸಭೆಯಲ್ಲಿ ಮಂಡನೆಯಾಗಲಿದೆ. ಮಸೂದೆ ಜಾರಿ ಮಾಡಲು ಮುಂದಾಗಿರುವ…
