ಬಳ್ಳಾರಿ ಎಸ್ಸಿಎಸ್ಪಿ, ಟಿಎಸ್ಪಿ ಅನುದಾನ ಸಮಪರ್ಕವಾಗಿ ಬಳಸಿಕೊಳ್ಳಲು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ
ಬಳ್ಳಾರಿ ಪಟ್ಟಣದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ 2024-25ನೇ ಸಾಲಿಗೆ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಅನುಸೂಚಿತ ಬುಡಕಟ್ಟು ಉಪಯೋಜನೆಯ ವಿವಿಧ ಇಲಾಖೆಗಳಡಿಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅನುದಾನವನ್ನು ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಉಪಯೋಗಿಸುತ್ತಿದ್ದು, ಪ್ರಗತಿಯಲ್ಲಿ ಹಿನ್ನಡೆಯಾಗಬಾರದು ಮತ್ತು ಉದ್ದೇಶಿತ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.ಜಿಲ್ಲೆಯ ಒಟ್ಟು ಎಸ್ಸಿಎಸ್ಪಿ ಅನುದಾನ ರೂ.3977.90 ಲಕ್ಷ ಅನುದಾನ ಬಿಡುಗಡೆಯಾಗಿದೆ. ಟಿಎಸ್ಪಿ ರೂ.5609.28 ಲಕ್ಷ ಅನುದಾನ…
