ಹುಬ್ಬಳ್ಳಿಯಿಂದ ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಬಸ್ ವ್ಯವಸ್ಥೆ
ಹುಣ್ಣಿಮೆ ಹಾಗೂ ಅಮಾವಾಸ್ಯೆಯ ದಿನಗಳಲ್ಲಿ ಹುಬ್ಬಳ್ಳಿ ನಗರದಿಂದ ಬೆಳಗಾವಿ ಜಿಲ್ಲೆ ಸವದತ್ತಿಯ ಯಲ್ಲಮ್ಮನ ದೇವಸ್ಥಾನಕ್ಕೆ ಹೋಗುವ ಭಕ್ತರಿಗೆ ಅನುಕೂಲವಾಗುವಂತೆ ವಾಯುವ್ಯ ಸಾರಿಗೆ ಸಂಸ್ಥೆಯ ವತಿಯಿಂದ ವಿಶೇಷ ಬಸ್‌ಗಳನ್ನು ಓಡಿಸುತ್ತಿರುವುದಾಗಿ ಸಾರಿಗೆ ಸಂಸ್ಥೆ ತಿಳಿಸಿದೆ.ಸವದತ್ತಿಯ ಯಲ್ಲಮ್ಮನ ದೇವಿಯ ದರ್ಶನಕ್ಕೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ಡಿಸೆಂಬರ್ 15 ರಂದು ಭಾನುವಾರ ಹುಣ್ಣಿಮೆಯಂದು ಮತ್ತು ಬರುವ ಅಮಾವಾಸ್ಯೆಯ ವರೆಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರದಂದು ಹುಬ್ಬಳ್ಳಿಯಿಂದ ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಈ ಬಗ್ಗೆ ವಾಯವ್ಯ ಕರ್ನಾಟಕ…
