ಕರ್ನಾಟಕ ಬಾಲ ವಿಕಾಸ ಅಕಾಡೆಮಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ
ಧಾರವಾಡ ಕನ್ನಡ ಮಾಧ್ಯಮದ ಸಾಧಕ ವಿದ್ಯಾರ್ಥಿಗಳಿಗೆ ಅಧ್ಯಯನ ಪ್ರವಾಸ: ಸಂಗಮೇಶ ಬಬಲೇಶ್ವರ . ಕನ್ನಡ ನಾಡು ನುಡಿ ರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದ್ದು ಕನ್ನಡದ ಆಸ್ಮಿತೆಯನ್ನು ಎತ್ತಿ ಹಿಡಿಯಲು ನಾವೆಲ್ಲರೂ ಕನ್ನಡ ಭಾಷೆಯನ್ನ ಬಳಸಬೇಕು ಮತ್ತು ಬೆಳೆಸಬೇಕು ಆ ನಿಟ್ಟಿನಲ್ಲಿ ನಾಡಿನ ಕನ್ನಡ ಮಾಧ್ಯಮ ಶಾಲೆಗಳನ್ನು ಬಲಪಡಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡಬೇಕಾಗಿದೆ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರಲ್ಲದೆ ನಾಡಿನ ಕನ್ನಡ ಮಾಧ್ಯಮದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಬರೆದು 625 ಕ್ಕೆ 625 ಅಂಕ…
