ಹುಬ್ಬಳ್ಳಿ- ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಒಪ್ಪಂದ
ಬೆಂಗಳೂರು, ಏಪ್ರಿಲ್ 12: ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳ ನಡುವೆ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ (Electric Rapid Transit (e-RT) ಯೋಜನೆ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಸಿ, ಸಾಧಕ- ಭಾದಕಗಳ ಕುರಿತು ಚರ್ಚಿಸಲಾಯಿತು. ಉದ್ದೇಶಿತ ಯೋಜನೆಯ ಸಾಧ್ಯಾ ಸಾಧ್ಯತೆ ಮತ್ತು ಅವಕಾಶಗಳನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಸಭೆಯಲ್ಲಿ ವಿವರಿಸಿದರು. ಈ ವೇಳೆ ವಿದ್ಯುತ್ ಚಾಲಿತ…
