ಛತ್ತೀಸ್ಗಢದ ಬಿಜಾಪುರದಲ್ಲಿ ಜನವರಿ 1ರ ರಾತ್ರಿಯಿಂದ ನಾಪತ್ತೆಯಾಗಿದ್ದ ಪತ್ರಕರ್ತ ಮುಖೇಶ್ ಚಂದ್ರಕರ್ ಅವರು ಶವವಾಗಿ ಪತ್ತೆಯಾಗಿದ್ದಾರೆ.
ಛತ್ತೀಸ್ಗಢದ ಬಿಜಾಪುರದಲ್ಲಿ ಜನವರಿ 1ರ ರಾತ್ರಿಯಿಂದ ನಾಪತ್ತೆಯಾಗಿದ್ದ ಪತ್ರಕರ್ತ ಮುಖೇಶ್ ಚಂದ್ರಕರ್ ಅವರು ಶವವಾಗಿ ಪತ್ತೆಯಾಗಿದ್ದಾರೆ. ಮುಖೇಶ್ ಅವರ ಶವವನ್ನು ಬಿಜಾಪುರ ನಗರದ ಚಟ್ಟನ್ಪಾರಾ ಪ್ರದೇಶದಲ್ಲಿ ಗುತ್ತಿಗೆದಾರರೊಬ್ಬರ ಆವರಣದಲ್ಲಿರುವ ಸೆಪ್ಟಿಕ್ ಟ್ಯಾಂಕ್ನಿಂದ ಪತ್ತೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪತ್ರಕರ್ತನನ್ನು ಹತ್ಯೆಗೈದಿದ್ದಾರೆ ಎಂದು ಶಂಕಿಸಲಾಗಿದೆ. ಪತ್ರಕರ್ತನ ಶವ ಪತ್ತೆಯಾದ ಜಾಗ ಗುತ್ತಿಗೆದಾರ ಸುರೇಶ್ ಚಂದ್ರಕರ್ ಅವರಿಗೆ ಸೇರಿದ್ದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೀಗ ಕೊಲೆ ಪ್ರಕರಣ ದಾಖಲಾಗಿದೆ. ಹಲವು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ….
