BREAKING NEWS

ರಕ್ಷಾ ಬಂಧನ ಹಬ್ಬವನ್ನು ಪೊಲೀಸ್ ಸಿಬ್ಬಂದಿ ಹಾಗೂ ಮಾಜಿ ಸೈನಿಕರೊಂದಿಗೆ ಆಚರಣೆ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಜನಸ್ನೇಹಿ ಪೊಲೀಸ್ ಠಾಣೆ ರಾಮದುರ್ಗದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಹಾಗೂ ಮಹಿಳಾ ಕಾರ್ಯಕರ್ತರು. ರಕ್ಷಾ ಬಂಧನ ದಿನದಂದು ರಾಕಿ ಕಟ್ಟುವ ಮೂಲಕದೇಶದ ಸೈನಿಕರು ಹಾಗೂ ಪೊಲೀಸರು ಕೂಡ ನಮ್ಮ ಕುಟುಂಬದವರೆ ಎನ್ನುವ ಸಂದೇಶವನ್ನು ಸಾರುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಪೊಲೀಸ್ ಠಾಣೆಯಲ್ಲಿ ಆಚರಿಸುತಿದ್ದೇವೆ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರು ,ಜಿಲ್ಲಾ ಸಹ ಸಂಚಾಲಕರು ಶ್ರೀಮತಿ ಶಾಲಿನಿ ಇಳಿಗೇರ ಅವರು ಹೇಳಿದರು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರು ಆದ….

Read More

ಕ್ರೀಡೆಗಳನ್ನು ಒಳ್ಳೆಯ ಹವ್ಯಾಸಗಳನ್ನಾಗಿ ಜೀವನದಲ್ಲಿ ರೂಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಶಾಸಕ ವಿಶ್ವಾಸ ವಸಂತ ವೈದ್ಯ ಕರೆ ನೀಡಿದರು.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಸರ್ಕಾರಿ ಪ್ರೌಢಶಾಲೆ ಕಗದಾಳದಲ್ಲಿ 2025-26 ನೇ ಸಾಲಿನ ಹುಲಿಕಟ್ಟಿ ಕ್ಲಸ್ಟರ್ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಕ್ರೀಡಾಕೂಟವನ್ನು ಶಾಸಕ ವಿಶ್ವಾಸ ವಸಂತ ವೈದ್ಯ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಕ್ರೀಡೆಗಳು ಧೈರ್ಯ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವುದರ ಜೊತೆಗೆ ಯುವಕರಲ್ಲಿ ಧೈರ್ಯ ಮತ್ತು ಸಾಹಸದಂತಹ ಗುಣಗಳನ್ನು ವೃದ್ಧಿಸುತ್ತವೆ. ಅದಕ್ಕಾಗಿ ಕ್ರೀಡೆಗಳನ್ನು ಒಳ್ಳೆಯ ಹವ್ಯಾಸಗಳನ್ನಾಗಿ ಜೀವನದಲ್ಲಿ ರೂಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ…

Read More

ಯಡ್ರಾಂವಿ ಸರ್ಕಾರಿ ಆದರ್ಶ ಶಾಲೆಯಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕ ಕಾನೂನು ಸೇವೆಗಳ ಸಮಿತಿ ಸವದತ್ತಿ ಹಾಗೂ ವಕೀಲರ ಸಂಘ ಸವದತ್ತಿ ಮತ್ತು ಮತ್ತು ಸರ್ಕಾರಿ ಆದರ್ಶ ವಿದ್ಯಾಲಯ ಯಡ್ರಾಂವಿ ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಆದರ್ಶ ಶಾಲೆಯಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಸಂವಿಧಾನ ಬದ್ದವಾಗಿ ಎಲ್ಲ ಭಾರತೀಯ ನಾಗರಿಕರಿಗೆ ಇರುವ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳು ಬಗ್ಗೆ ಅರಿವು ಮತ್ತು ಖಾಯಂ ಜನತಾ ನ್ಯಾಯಾಲಯಗಳ ಬಗ್ಗೆ ತಿಳಿಸುವ ಜಾಗೃತಿ ಮತ್ತು ಉಚಿತ ಕಾನೂನು…

Read More

ರಾಮದುರ್ಗ ಮಳೆರಾಜ ಮಠದ ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳ ವಿವರ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸುಕ್ಷೇತ್ರ ಮಳೆರಾಜ ಮಠದ ಜಾತ್ರಾ ಮಹೋತ್ಸವದ ಕಾರ್ಯಕ್ರಮವು ಅಗಸ್ಟ್ 11-2025 ರಿಂದ ಅಗಸ್ಟ್ 15-2025 ರವರೆಗೆ ಜರಗಲಿದೆ. ಶ್ರೀ ಅಭಿನವ ಸದಾಶಿವ ಮಹಾಸ್ವಾಮಿಗಳ ಮಳೆರಾಜ ಮಠ, ರಾಮದುರ್ಗ ಇವರ ಸಯುಕ್ತ ಆಶ್ರಯದಲ್ಲಿ ಶ್ರಾವಣ 3ನೇ ಸೋಮವಾರ ಅಗಸ್ಟ್ 11 ರಂದು ತೆಪ್ಪದ ತೇರಿನ ಉತ್ಸವ, ಅಗಸ್ಟ್ 12ರಂದು ಸಣ್ಣ ಕುಸ್ತಿ,ಅಗಸ್ಟ್ 13ರಂದು ಕುಸ್ತಿ, ಅಗಸ್ಟ್ 14ರಂದು ದೊಡ್ಡ ಕುಸ್ತಿ, ಅಗಸ್ಟ್ 15 ರಂದು ಕಳಸಾರೋಹಣ ಮತ್ತು ವಾಣಿ ಕಾರ್ಯಕ್ರಮ ಜರಗುವುದು.

Read More

ಬೆಸ್ಕಾಂ ಗೋಲ್ಮಾಲ್: ಕೋಟ್ಯಂತರ ರೂ. ಅವ್ಯವಹಾರ ಆರೋಪ, ಕೋಲಾರದಲ್ಲಿ ಪ್ರಕರಣ ದಾಖಲು

ಕೋಲಾರ: ವಿದ್ಯುತ್ ಪರಿಕರಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಮಾರಾಟ ಮಾಡಿರುವ ಆರೋಪದಲ್ಲಿ ಮೂವರು ಬೆಸ್ಕಾಂ ಎಂಜಿನಿಯರ್ ಸೇರಿ ಹಲವು ಸಿಬ್ಬಂದಿ ವಿರುದ್ದ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಹಗರಣದಲ್ಲಿ ಹಿರಿಯ ಅಧಿಕಾರಿಗಳು ಶಾಮೀಲಾಗಿರುವ ಆರೋಪವಿದ್ದು, ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎನ್ನಲಾಗಿದೆ. ವಿದ್ಯುತ್ ತಂತಿ ಹಾಗೂ ಬೆಲೆ ಬಾಳುವ ವಿದ್ಯುತ್ ಪರಿಕರಗಳನ್ನು ಕಳ್ಳತನ ಮಾಡಿ ಯಾವುದೇ ಟೆಂಡರ್ ಇಲ್ಲದೆ ಮಾರಾಟ ಮಾಡಿರುವ ಹಗರಣದ ಆರೋಪ ಬೆಸ್ಕಾಂ (BESCOM) ಅಧಿಕಾರಿಗಳು ಹಾಗೂ ಎಂಜಿನಿಯರ್ಗಳ ವಿರುದ್ಧ ಕೇಳಿಬಂದಿದೆ….

Read More

ಲೋಕಾಯುಕ್ತ ಪ್ರಕರಣಗಳ ವಿಲೇವಾರಿ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆ

ಬೆಳಗಾವಿ ಸುವರ್ಣ ವಿಧಾನ ಸೌಧದ ಸೆಂಟ್ರಲ್ ಹಾಲ್ ನಲ್ಲಿ ಬುಧವಾರ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಲೋಕಾಯುಕ್ತ ಪ್ರಕರಣಗಳ ವಿಲೇವಾರಿ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ಗೌರವಾನ್ವಿತ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ ವಹಿಸಿ ಅವರು ಮಾತನಾಡಿದರು. ಬೆಳಗಾವಿ ರಾಜ್ಯದ ಅತಿ ಹೆಚ್ಚು ವಿಸ್ತೀರ್ಣ ಹೊಂದಿದ ದೊಡ್ಡ ಜಿಲ್ಲೆಯಾಗಿದ್ದು, ಆಡಳಿತಾತ್ಮಕವಾಗಿ ಸುಧೀರ್ಘವಾದ ಕ್ಷೇತ್ರವಾಗಿದೆ. ಜಿಲ್ಲೆಯನ್ನು ಮಾದರಿ, ಭ್ರಷ್ಟಾಚಾರ ಮುಕ್ತ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು.ಸರಕಾರವು ಜನಸಾಮಾನ್ಯರ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು…

Read More

ರೈಲು ಹೋರಾಟ ಸಮಿತಿ ರಾಮದುರ್ಗ ವತಿಯಿಂದ ಆಗಷ್ಟ 11 ರಂದು ಉಪವಾಸ ಸತ್ಯಗ್ರಹ : ಬಿ ಯು ಭೈರಕದಾರ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ನ್ಯಾಷನಲ್ ಹ್ಯೂಮನ್ ರೈಟ್ಸ್ ರಾಜ್ಯ ಅಧ್ಯಕ್ಷ, ರೈಲು ಹೋರಾಟ ಸಮಿತಿ ರಾಮದುರ್ಗ ಅಧ್ಯಕ್ಷರಾದ ಬಿ ಯು ಭೈರಕದಾರ   ಮಾತನಾಡಿದ ಅವರು ರಾಮದುರ್ಗಕ್ಕೆ ಹೊಸ ರೈಲು ಮಾರ್ಗ ಒತ್ತಾಯಿಸಿ   ರೈಲು ಹೋರಾಟ ಸಮಿತಿ ರಾಮದುರ್ಗ ಹಾಗೂ ವಿವಿಧ ಸಂಘಟನೆಗಳ ವೇದಿಕೆ ವತಿಯಿಂದ ಆಗಷ್ಟ 11 2025 ಸೋಮವಾರ ರಂದು ತಾಲೂಕು ಆಡಳಿತ ಭವನ ಮಿನಿ ವಿಧಾನಸೌಧದ ಮುಂದೆ  ಉಪವಾಸ ಸತ್ಯಗ್ರಹ ಪ್ರಾರಂಭಿಸಲಾಗುವುದು  ಹಾಗೂ ನಾವು ಸುಮಾರು ವರ್ಷಗಳಿಂದ ನಮ್ಮ ಮಾನವ…

Read More

ಆ.8ರಿಂದ ಬೆಟಗೇರಿ ವೀರಭದ್ರೇಶ್ವರ ದೇವರ ಜಾತ್ರಾಮಹೋತ್ಸವ

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ನೂಲ ಹುಣ್ಣಿಮೆ ಹಾಗೂ ಶ್ರಾವಣ ಮಾಸದ ಪ್ರಯುಕ್ತ ಆಗಷ್ಟ 8 ಮತ್ತು 9ರಂದು ಇಲ್ಲಿಯ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ ನಡೆಯಲಿದೆ.ಆ.8ರಂದು ಇಲ್ಲಿಯ ಶ್ರೀ ವೀರಭದ್ರೇಶ್ವರ ದೇವರ ದೇವಾಲಯದ ವೀರಭದ್ರೇಶ್ವರ ದೇವರ ಗದ್ಗುಗೆ ಪೂಜೆ, ನೈವೇದ್ಯ ಸಮರ್ಪನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದೆ. ರಾತ್ರಿ 8 ಗಂಟೆಗೆ ಜೀ ಕನ್ನಡ ಸರಿಗಮಪ ಖ್ಯಾತಿಯ ಶ್ರೀಮತಿ ಸುಜಾತಾ ಕಲ್ಮೇಶ ಹಾಗೂ ತಂಡದವರಿಂದ ಸುಗಮ ಸಂಗೀತ, ವಿವಿಧ ಭಜನಾ…

Read More

ಮಕ್ಕಳ ಸಕಾರಾತ್ಮಕ ಬೆಳವಣಿಗೆಗೆ ಕಲಾ ಪ್ರತಿಭೆ ಕಾರ್ಯಕ್ರಮಗಳು ಅಗತ್ಯ: ರಾಮನಗೌಡ ಕನ್ನೋಳ್ಳಿ

ಬೆಳಗಾವಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಶನಿವಾರ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ನಡೆದ “ಚಿಗುರು 2025-26” ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳ್ಳಿ ಅವರು ಜ್ಯೋತಿ ಬೆಳಗಿಸೋದರ ಮೂಲಕ ಚಾಲನೆ ನೀಡಿ ಮಾತನಾಡಿದರು. ಮಕ್ಕಳ ಕಲಾ ಪ್ರತಿಭೆ ಸಹಜವಾಗಿರುತ್ತದೆ, ಶಿಕ್ಷಣದ ಮೂಲಕ ಅದನ್ನು ಬೆಳೆಸಬೇಕು.ಕಲಾ ಅಭಿವ್ಯಕ್ತಿಯ ಮೂಲಕ ಮಗು ತನ್ನ ಭಾವನೆಗಳನ್ನು ಹೊರಹಾಕುತ್ತೆ. ಕಲೆಯು ಮಕ್ಕಳ ಒಳಗಿನ ಆತ್ಮಸೌಂದರ್ಯವನ್ನು ಬೆಳಗಿಸುತ್ತದೆ ಎಂದರು. 8 ರಿಂದ 14 ವರ್ಷದ ಒಳಗಿನ ಮಕ್ಕಳಲ್ಲಿರುವ…

Read More

ಸರ್ಕಾರಿ ಆದರ್ಶ ವಿದ್ಯಾಲಯ ಯಡ್ರಾವಿಯ ಶಾಲೆಯ 6ನೇ ತರಗತಿಯ ಮಕ್ಕಳಿಗೆ ಸ್ವಾಗತ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಡ್ರಾವಿಯ ಸರ್ಕಾರಿ ಆದರ್ಶ ವಿದ್ಯಾಲಯ ಯಡ್ರಾವಿಯ ಶಾಲೆಯ 6ನೇ ತರಗತಿಯ ಮಕ್ಕಳಿಗೆ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಆರ್ ಎಫ್ ಮಾಘಿ ವಹಿಸಿಕೊಂಡಿದ್ದರು ಅತಿಥಿಗಳಾಗಿ ಎಸ್ ಡಿ ಎಂ ಸಿ ಯ ಅಧ್ಯಕ್ಷರಾದ ಸುರೇಶ್ ಎಸ್ ಕಾಳಪ್ಪನವರ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ಸುಕನ್ಯಾ ಬೀಳಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಎಸ್‌ ಡಿ ಎಂ ಸಿ ಯ ಸದಸ್ಯರಾದ ಶ್ರೀ ಮಂಜುನಾಥ್ ಪಾಟೀಲ್ ಶ್ರೀ ಶಿವನಗೌಡ…

Read More