ಕ್ರೀಡೆಗಳನ್ನು ಒಳ್ಳೆಯ ಹವ್ಯಾಸಗಳನ್ನಾಗಿ ಜೀವನದಲ್ಲಿ ರೂಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಶಾಸಕ ವಿಶ್ವಾಸ ವಸಂತ ವೈದ್ಯ ಕರೆ ನೀಡಿದರು.
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಸರ್ಕಾರಿ ಪ್ರೌಢಶಾಲೆ ಕಗದಾಳದಲ್ಲಿ 2025-26 ನೇ ಸಾಲಿನ ಹುಲಿಕಟ್ಟಿ ಕ್ಲಸ್ಟರ್ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಕ್ರೀಡಾಕೂಟವನ್ನು ಶಾಸಕ ವಿಶ್ವಾಸ ವಸಂತ ವೈದ್ಯ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಕ್ರೀಡೆಗಳು ಧೈರ್ಯ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವುದರ ಜೊತೆಗೆ ಯುವಕರಲ್ಲಿ ಧೈರ್ಯ ಮತ್ತು ಸಾಹಸದಂತಹ ಗುಣಗಳನ್ನು ವೃದ್ಧಿಸುತ್ತವೆ. ಅದಕ್ಕಾಗಿ ಕ್ರೀಡೆಗಳನ್ನು ಒಳ್ಳೆಯ ಹವ್ಯಾಸಗಳನ್ನಾಗಿ ಜೀವನದಲ್ಲಿ ರೂಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ…
