ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
ಬೆಳಗಾವಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಾಣಿಜ್ಯ ತೆರಿಗೆ ಆಯುಕ್ತರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಲ್ ವಹಿಸಿ ಮಾತನಾಡಿದರು.ಅನುದಾನಿತ ಶಾಲೆಗಳಲ್ಲಿಯೂ ಸಹ ಪರೀಕ್ಷಾ ಫಲಿತಾಂಶ ಕುಂಠಿತವಾಗಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳು ಅನುದಾನಿತ ಶಾಲೆಗಳಲ್ಲಿ ಪರೀಕ್ಷಾ ಫಲಿತಾಂಶ ಸುಧಾರಣೆಗಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಮುಂಗಾರು ಉತ್ತಮವಾಗಿದ್ದು, ರೈತರಿಗೆ ಅಗತ್ಯದ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಆಗದಂತೆ ನಿಗಾವಹಿಸಬೇಕು. ಮುಂಗಾರು ಹಂಗಾಮು…
