25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಇಬ್ಬರು ನಗರಸಭೆ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಚಾಮರಾಜನಗರ ನಗರಸಭೆಯ ಕಚೇರಿಯಲ್ಲಿ 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಇಬ್ಬರು ನಗರಸಭೆ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಾ.ನಗರ ನಗರಸಭೆಯ ಕಂದಾಯ ನಿರೀಕ್ಷಕ ಶಕೀಲ್ ಅಹಮದ್, ಕಂದಾಯ ಅಧಿಕಾರಿ ಹೇಮಕುಮಾರ್ ನಿವೇಶನವನ್ನು ಇ ಖಾತೆ ಮಾಡಿಕೊಡಲು 25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದನ್ನು ಪಡೆದುಕೊಳ್ಳುವಾಗ ನೇರವಾಗಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಗಜೇಂದ್ರ ಪ್ರಸಾದ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಲೋಹಿತ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಇ ಖಾತೆ ಮಾಡಿಕೊಡಲು ಅಧಿಕಾರಿಗಳಿಗೆ ಮಧ್ಯವರ್ತಿಯಾಗಿದ್ದ…
