ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣಕಾನೂನು ಬದ್ಧ ವಸೂಲಾತಿಗೆ ಕ್ರಮವಹಿಸಬೇಕು: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ವಿವಿಧ ಬ್ಯಾಂಕಗಳು/ಸಹಕಾರಿ ಸಂಘಗಳ/ಮೈಕ್ರೋ ಫೈನಾನ್ಸ್ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆಯನ್ನು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ವಹಿಸಿ ಅವರು ಮಾತನಾಡಿದರು.ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿರುವ ಪ್ರಕರಣಗಳು ಕ್ರಮೇಣ ಹೆಚ್ಚುತ್ತಿವೆಮನೆಗಳಿಗೆ ಹೋಗಿ ಕಿರುಕುಳ ನೀಡಬಾರದು. ಕಾನೂನು ಬದ್ಧವಾಗಿ ನೋಟಿಸ್ ಜಾರಿ ಮಾಡಬೇಕು. ಫೈನಾನ್ಸ್ ಗಳಿಂದ ಪಡೆದ ಸಾಲ ಮನ್ನ ಆಗುತ್ತಿದೆ ಎಂದು ಸಾರ್ವಜನಿಕ ವಲಯಗಳಲ್ಲಿ ನಂಬಿಕೆಯಿದೆ. ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಸರ್ಕಾರ ಮಧ್ಯಪ್ರವೇಶಿಸಿದೆ….
