ರಾಜ್ಯೋತ್ಸವ ಸಂದರ್ಭದಲ್ಲಿ ಕರಾಳ ದಿನ ಆಚರಣೆಗೆ ಸಿದ್ಧತೆ ನಡೆಸುತ್ತಿರುವ ಎಂಇಎಸ್ ಪುಂಡರಿಗೆ ಅವಕಾಶ ನೀಡಬಾರದೆಂದು ಒತ್ತಾಯಿಸಿ ಕರ್ನಾಟಕ ರಕ್ಷಾಣಾ ವೇದಿಕೆ ಕಾರ್ಯಕರ್ತರು ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ರಾಮದುರ್ಗ ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಎಂಇಎಸ್ ಪುಂಡರು ಕರಾಳ ದಿನಾಚರಣೆ ಆಚರಿಸುವ ಬಗ್ಗೆ ಸಿದ್ಧತೆ ನಡೆಸುತ್ತಿರುವ ಕುರಿತು ಸುಳಿವು ದೊರೆಯುತ್ತಿದೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಕರಾಳ ದಿನಾಚರಣೆಗೆ ಅವಕಾಶ ನೀಡಬಾರದು ಎಂದು ಪ್ರತಿಭಟಿಸಿ ಕರ್ನಾಟಕ ರಕ್ಷಾಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರು ತಹಶೀಲ್ದಾರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ವೇಳೆ ತಾಲೂಕಾಅಧ್ಯಕ್ಷ ವಿಜಯಕುಮಾರ ರಾಠೋಡ ಮಾತನಾಡಿದ ಅವರು ನಾಡದ್ರೋಹಿ ಎಂಇಎಸ್ ಹಲವು ದಿನಗಳಿಂದ ನಾಡಿನ ನ. ೧ ರ ಕರ್ನಾಟಕ ರಾಜ್ಯೋತ್ಸವ ಆಚರಣೆ…
