ಡ್ರಗ್ಸ್ ಪಾಜಿಟಿವ್ ಪ್ರಕರಣಗಳ ಪಾಲೊಅಪ್ ಮಾಡಿ; ಪಾಲಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡ್ರಗ್ಸ್ ನಿಯಂತ್ರಣ ಮತ್ತು ಜಾಗೃತಿ ಕಾರ್ಯಕ್ರಮಗಳ ಕುರಿತು ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿದರು. ಅವಳಿ ನಗರದಲ್ಲಿ ಮಾದಕ ವಸ್ತು ಮತ್ತು ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟದ ಕುರಿತು ತಪಾಸಣೆ, ವಿಚಾರಣೆ ಕೈಗೊಂಡ ಬಗ್ಗೆ ಸಮಿತಿಗೆ ವರದಿ ಸಲ್ಲಿಸಬೇಕು. 354 ಯುವಕರ ಪೈಕಿ 168 ಜನ ವಿದ್ಯಾರ್ಥಿಗಳಲ್ಲಿ ಡ್ರಗ್ಸ್ ಸೇವನೆ ಪಾಜಿಟಿವ್ ಬಂದಿರುವುದು ಸಾಮಾನ್ಯ ಸಂಗತಿಯಲ್ಲ. ಡ್ರಗ್ಸ್ ಹಾನಿ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಪ್ರಚಾರ ಮಾಡುವ…
