WhatsApp Group
Join Now
ಬೆಳಗಾವಿ : ಉಳವಿ ಚೆನ್ನಬಸವೇಶ್ವರ ದೇವಸ್ಥಾನಕ್ಕೆ ಸಂಪರ್ಕಿಸುವ ರಸ್ತೆ ಹದಗೆಟ್ಟಿದ್ದು ಭಕ್ತರು ತೊಂದರೆ ಅನುಭವಿಸುತ್ತಿದ್ದು ಕೂಡಲೇ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು
ಸೋಮವಾರ ಭೇಟಿಯಾದ ಕರವೇ ಸದಸ್ಯರು ಸುಕ್ಷೇತ್ರ ಉಳವಿ ದೇವಸ್ಥಾನಕ್ಕೆ ಧಾರವಾಡ ಹುಬ್ಬಳ್ಳಿ ಬೆಳಗಾವಿ ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರ ಆಗಮಿಸುತ್ತಾರೆ ಮಳೆಯಿಂದ ಫೋಟೋಳ್ಳಿ ಕ್ರಾಸ್ ನಿಂದ ಗುಂದ ಮಾರಕವಾಗಿ ಉಳವಿ ಚನ್ನಬಸವೇಶ್ವರ ದೇವಸ್ಥಾನಕ್ಕೆ ಸಂಪರ್ಕ ಸಾಧಿಸುವ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು
ಮನವಿ ಸ್ವೀಕರಿಸಿ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ ಕೂಡಲೇ ಉಳವಿ ಚನ್ನಬಸವೇಶ್ವರ ದೇವಸ್ಥಾನ ರಸ್ತೆ ದುರಸ್ತಿಗೆ ಆದಷ್ಟು ಬೇಗ ರಸ್ತೆ ದುರಸ್ತಿಗೆ ಟೆಂಡರ್ ಕರೆಯುವಂತೆ ಆದೇಶ ನೀಡಿದರು