ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹನಿ ಹಾಕುವ ಮೂಲಕ ಸಚಿವ ಸತೀಶ ಜಾರಕಿಹೊಳಿ ಚಾಲನೆ ನೀಡಿದರು.
ಗೋಕಾಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಭಾನುವಾರ ಜರುಗಿದ ಬೆಳಗಾವಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹನಿ ಹಾಕುವ ಮೂಲಕ ಚಾಲನೆ ನೀಡಿದರು. ಇತರೆ ದೇಶಗಳಲ್ಲಿ ಪೋಲಿಯೋ ಸೋಂಕು ಇರುವುದರಿಂದ ಮಕ್ಕಳ ಹಿತಾಸಕ್ತಿಗಾಗಿ ಸರ್ಕಾರ ಪೋಲಿಯೋ ಅಭಿಯಾನ ನಡೆಸಿಕೊಂಡು ಬರುತ್ತಿದೆ. ದೇಶದಲ್ಲಿ 2011 ರಲ್ಲಿ ಕೊನೆಯದಾಗಿ ಪೋಲಿಯೋ ಪ್ರಕರಣ ಕಂಡುಬಂದಿದ್ದು ಅದರಂತೆ ಬೆಳಗಾವಿ ಜಿಲ್ಲೆಯಲ್ಲಿ 1998 ರಲ್ಲಿ ಕೊನೆಯ…
