
ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಶನ್ ಉದ್ಘಾಟನೆ
ಬೆಳಗಾವಿ ನಗರದ ಎಸ್.ಜಿ.ಬಿ.ಐ.ಟಿ ಕಾಲೇಜಿನ ಸಭಾಂಗಣದಲ್ಲಿ ರವಿವಾರ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟನಾ ಕಾರ್ಯಕ್ರಮವನ್ನು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಭಾಷಾ ಸೂಕ್ಷ್ಮತೆ ಇರುವುದರಿಂದ ಜಿಲ್ಲೆಯಲ್ಲಿ ನಡೆಯುವ ವರದಿಗಳು ದೆಹಲಿಯಲ್ಲಿ ಕೂಡ ಸದ್ದು ಮಾಡುತ್ತವೆ. ಆದ್ದರಿಂದ ಕೆಲವೊಮ್ಮೆ ವೈಯಕ್ತಿಕ ಘರ್ಷಣೆಗಳು ಕೂಡ ಜಾತಿ-ಧರ್ಮ, ಭಾಷಾ ವೈಷಮ್ಯದ ಸ್ವರೂಪ ಪಡೆದುಕೊಂಡು ಜಿಲ್ಲೆಗೆ ಕೆಟ್ಟ ಹೆಸರು ತರುತ್ತವೆ. ಇದರಿಂದ ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ….