Prashanth Angadi

ಆ.8ರಿಂದ ಬೆಟಗೇರಿ ವೀರಭದ್ರೇಶ್ವರ ದೇವರ ಜಾತ್ರಾಮಹೋತ್ಸವ

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ನೂಲ ಹುಣ್ಣಿಮೆ ಹಾಗೂ ಶ್ರಾವಣ ಮಾಸದ ಪ್ರಯುಕ್ತ ಆಗಷ್ಟ 8 ಮತ್ತು 9ರಂದು ಇಲ್ಲಿಯ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ ನಡೆಯಲಿದೆ.ಆ.8ರಂದು ಇಲ್ಲಿಯ ಶ್ರೀ ವೀರಭದ್ರೇಶ್ವರ ದೇವರ ದೇವಾಲಯದ ವೀರಭದ್ರೇಶ್ವರ ದೇವರ ಗದ್ಗುಗೆ ಪೂಜೆ, ನೈವೇದ್ಯ ಸಮರ್ಪನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದೆ. ರಾತ್ರಿ 8 ಗಂಟೆಗೆ ಜೀ ಕನ್ನಡ ಸರಿಗಮಪ ಖ್ಯಾತಿಯ ಶ್ರೀಮತಿ ಸುಜಾತಾ ಕಲ್ಮೇಶ ಹಾಗೂ ತಂಡದವರಿಂದ ಸುಗಮ ಸಂಗೀತ, ವಿವಿಧ ಭಜನಾ…

Read More

ಮಕ್ಕಳ ಸಕಾರಾತ್ಮಕ ಬೆಳವಣಿಗೆಗೆ ಕಲಾ ಪ್ರತಿಭೆ ಕಾರ್ಯಕ್ರಮಗಳು ಅಗತ್ಯ: ರಾಮನಗೌಡ ಕನ್ನೋಳ್ಳಿ

ಬೆಳಗಾವಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಶನಿವಾರ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ನಡೆದ “ಚಿಗುರು 2025-26” ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳ್ಳಿ ಅವರು ಜ್ಯೋತಿ ಬೆಳಗಿಸೋದರ ಮೂಲಕ ಚಾಲನೆ ನೀಡಿ ಮಾತನಾಡಿದರು. ಮಕ್ಕಳ ಕಲಾ ಪ್ರತಿಭೆ ಸಹಜವಾಗಿರುತ್ತದೆ, ಶಿಕ್ಷಣದ ಮೂಲಕ ಅದನ್ನು ಬೆಳೆಸಬೇಕು.ಕಲಾ ಅಭಿವ್ಯಕ್ತಿಯ ಮೂಲಕ ಮಗು ತನ್ನ ಭಾವನೆಗಳನ್ನು ಹೊರಹಾಕುತ್ತೆ. ಕಲೆಯು ಮಕ್ಕಳ ಒಳಗಿನ ಆತ್ಮಸೌಂದರ್ಯವನ್ನು ಬೆಳಗಿಸುತ್ತದೆ ಎಂದರು. 8 ರಿಂದ 14 ವರ್ಷದ ಒಳಗಿನ ಮಕ್ಕಳಲ್ಲಿರುವ…

Read More

ಸರ್ಕಾರಿ ಆದರ್ಶ ವಿದ್ಯಾಲಯ ಯಡ್ರಾವಿಯ ಶಾಲೆಯ 6ನೇ ತರಗತಿಯ ಮಕ್ಕಳಿಗೆ ಸ್ವಾಗತ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಡ್ರಾವಿಯ ಸರ್ಕಾರಿ ಆದರ್ಶ ವಿದ್ಯಾಲಯ ಯಡ್ರಾವಿಯ ಶಾಲೆಯ 6ನೇ ತರಗತಿಯ ಮಕ್ಕಳಿಗೆ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಆರ್ ಎಫ್ ಮಾಘಿ ವಹಿಸಿಕೊಂಡಿದ್ದರು ಅತಿಥಿಗಳಾಗಿ ಎಸ್ ಡಿ ಎಂ ಸಿ ಯ ಅಧ್ಯಕ್ಷರಾದ ಸುರೇಶ್ ಎಸ್ ಕಾಳಪ್ಪನವರ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ಸುಕನ್ಯಾ ಬೀಳಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಎಸ್‌ ಡಿ ಎಂ ಸಿ ಯ ಸದಸ್ಯರಾದ ಶ್ರೀ ಮಂಜುನಾಥ್ ಪಾಟೀಲ್ ಶ್ರೀ ಶಿವನಗೌಡ…

Read More

ರೈಲು ಹೋರಾಟ ಸಮಿತಿ ರಾಮದುರ್ಗ ವತಿಯಿಂದ ಆಗಷ್ಟ 11 ರಂದು ಉಪವಾಸ ಸತ್ಯಗ್ರಹಕ್ಕೆ ಪೂರ್ವಭಾವಿ ಸಭೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಆಡಳಿತ ಸೌಧದ ಹತ್ತಿರರುವ ಪ್ರವಾಸಿ ಮಂದಿರದಲ್ಲಿ ರಾಮದುರ್ಗ ರೈಲ್ವೆ ಮಾರ್ಗಕ್ಕೆ ಉಪವಾಸ ಸತ್ಯಗ್ರಹಕ್ಕೆ ರೈಲು ಹೋರಾಟ ಸಮಿತಿ ಅಧ್ಯಕ್ಷ   ಬಿ ಯು ಭೈರಕದಾರ  ಅವರ ಅಧ್ಯಕ್ಷತೇಯಲ್ಲಿ ಪೂರ್ವಭಾವಿ  ಸಭೆ ಜರಗಿತು. ಈ ಪೂರ್ವಭಾವಿ  ಸಭೆಯಲ್ಲಿ ರಾಮದುರ್ಗ ರೈಲ್ವೆ ಮಾರ್ಗಕ್ಕೆ ರಾಮದುರ್ಗದ ಎ ಆರ್ ಪಠಾಣ, ಡಿ ಎಫ್ ಹಾಜಿ, ಶಶಿಕಾಂತ್ ನೇಲೂರ್ ,ಶಿವಾನಂದ ಮಿಲಾನಿ, ಲಕ್ಶ್ಮಣ. ರಾಯಬಾಗ  ತಮ್ಮ ತಮ್ಮ ಅಭಿಪ್ರಾಯ ತಿಳಿಸಿದರು. ರೈಲು ಹೋರಾಟ ಸಮಿತಿ ಅಧ್ಯಕ್ಷ  ಬಿ ಯು ಬೈರಕದಾರ್ ಎಲ್ಲರ ಅಭಿಪ್ರಾಯ ಕೇಳಿ ನಂತರ್…

Read More

ಜಿಲ್ಲಾ ಮಟ್ಟದ ವಿವಿಧ‌ ಇಲಾಖೆಗಳ ಪ್ರಗತಿ‌ ಪರಿಶೀಲನಾ‌ ಸಭೆ

ಬೆಳಗಾವಿ ಜಿಲ್ಲಾ‌ ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿವಿಧ‌ ಇಲಾಖೆಗಳ ಪ್ರಗತಿ‌ ಪರಿಶೀಲನಾ‌ ಸಭೆಯ ಅಧ್ಯಕ್ಷತೆಯನ್ನು ವಾಣಿಜ್ಯ ತೆರಿಗೆ ಆಯುಕ್ತರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಲ್ ವಹಿಸಿ ಮಾತನಾಡಿದರು.ಅನುದಾನಿತ ಶಾಲೆಗಳಲ್ಲಿಯೂ ಸಹ ಪರೀಕ್ಷಾ ಫಲಿತಾಂಶ ಕುಂಠಿತವಾಗಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳು ಅನುದಾನಿತ ಶಾಲೆಗಳಲ್ಲಿ ಪರೀಕ್ಷಾ ಫಲಿತಾಂಶ ಸುಧಾರಣೆಗಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಮುಂಗಾರು ಉತ್ತಮವಾಗಿದ್ದು, ರೈತರಿಗೆ ಅಗತ್ಯದ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಆಗದಂತೆ ನಿಗಾವಹಿಸಬೇಕು. ಮುಂಗಾರು ಹಂಗಾಮು…

Read More

ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ‌ ಪ್ರಥಮ‌‌ ಮೇಲ್ಮನವಿ ಪ್ರಾಧಿಕಾರಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಅಧಿನಿಯಮ‌ ಕಾಯ್ದೆ ತರಬೇತಿ ಕಾರ್ಯಕ್ರಮ

ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಗುರುವಾರ ಜರುಗಿದ ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ‌ ಪ್ರಥಮ‌‌ ಮೇಲ್ಮನವಿ ಪ್ರಾಧಿಕಾರಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಅಧಿನಿಯಮ‌ ಕಾಯ್ದೆ ತರಬೇತಿ ಕಾರ್ಯಕ್ರಮದ‌ ಅಧ್ಯಕ್ಷತೆಯನ್ನು ರಾಜ್ಯ ಮುಖ್ಯ ಮಾಹಿತಿ‌ ಆಯುಕ್ತರಾದ ಎ.ಎಂ.ಪ್ರಸಾದ ವಹಿಸಿ ಅವರು ಮಾತನಾಡಿದರು. ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ಭ್ರಷ್ಟಾಚರ ನಿವಾರಣೆಗಾಗಿ‌ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೆ ತರಲಾಗಿದ್ದು. ಮಾಹಿತಿ ಹಕ್ಕು‌ಕಾಯ್ದೆಯಡಿ ಮಾಹಿತಿ ಕೋರಿ ಅರ್ಜಿ ಸಲ್ಲಿಸುವ ಅರ್ಜಿದಾರರಿಗೆ ಕಾಲಮಿತಿಯೊಳಗೆ ಮಾಹಿತಿ ಒದಗಿಸುವುದು ಸಾರ್ವಜನಿಕ ಮಾಹಿತಿ ಅಧಿಕಾರಿಯ ಕರ್ತವ್ಯವಾಗಿದೆ ಎಂದು ರಾಜ್ಯ…

Read More

ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು.

ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು. ಅಪಘಾತಗಳ ತಡೆಗೆ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಅತೀ ಮುಖ್ಯ. ನಗರದಲ್ಲಿ ಸಂಚಾರ ವ್ಯವಸ್ಥೆ ಉತ್ತಮ ನಿರ್ವಹಣೆಯಾಗುವಂತೆ ಸುರಕ್ಷತಾ ಆಧಾರದ ಮೇಲೆ ಕ್ರಿಯಾ ಯೋಜನೆಯನ್ನು ಅನುಷ್ಠಾನಗೊಳಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು. ಪೊಲೀಸ್, ಸಾರಿಗೆ, ಲೋಕೋಪಯೋಗಿ ಇಲಾಖೆಗಳು ರಸ್ತೆಗಳಲ್ಲಿ ಸಂಚಾರ ಸುಗಮವಾಗಿ ಸಾಗುವಂತೆ ನೋಡಿಕೊಳ್ಳಲು ಅಗತ್ಯವಿರುವ ಎಲ್ಲಾ…

Read More

ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಜೈಂಟ್ಸ ಗ್ರುಫ್‍ ಸಹಯೋಗದೊಂದಿಗೆ ಕಾನೂನು ಅರಿವು ನೆರವು ಕಾರ್ಯಕ್ರಮ.

ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಜೈಂಟ್ಸ ಗ್ರುಫ್‍ ಸಹಯೋಗದೊಂದಿಗೆ ಎಮ್.ಎಲ್.ಇ.ಎಸ್. ಆಂಗ್ಲ ಮಾದ್ಯಮ ಶಾಲೆ, ಮುನವಳ್ಳಿಯಲ್ಲಿ “ನಾಲ್ಸಾ (ಸಾಗಾಣಿಕೆ ಮತ್ತು ವಾಣಿಜ್ಯ ಲೈಂಗಿಕ ಶೋಷಣೆಯ ಬಲಿಪಶುಗಳು) ಯೋಜನೆ-2015” ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು. ಪ್ರಧಾನ ಹಿರಿಯ ಶ್ರೇಣಿ ಸಿವಿಲ್‍ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶ್ರೀ. ಸಿದ್ದರಾಮ, ರವರು ಸಸಿಗೆ ನೀರೆರೆಯುವುದರ ಮೂಲಕ ಕಾರ್ಯಕ್ರಮದ ಉದ್ಪಾಟನೆ ನೆರವೇರಿಸಿದರು. ನಂತರ ಮಾತನಾಡಿದ ಅವರು ಶಾಲಾ ವಿದ್ಯಾರ್ಥಿಗಳು ಸಾಮಾನ್ಯ ಕಾನೂನುಗಳ…

Read More

ಯಡ್ರಾವಿ ಶಾಲೆಯ ಮುಖ್ಯ ಪ್ರಾಧ್ಯಾಪಕರು ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಬಸ್ ಸೌಲಭ್ಯಕ್ಕಾಗಿ ತಶೀಲ್ದಾರಗೆ ಮನವಿ.

ಬೆಳಗಾವಿ ಜಿಲ್ಲೆ ಸವದತ್ತಿಯ ತಾಲೂಕಿನ ಸರ್ಕಾರಿ ಆದರ್ಶ ವಿದ್ಯಾಲಯ ಯಡ್ರಾವಿ ಶಾಲೆಗೆ ತಾಲೂಕಿನ ಸುಮಾರು 30 ಹಳ್ಳಿಗಳಿಂದ ಆಯ್ಕೆಯಾಗಿರುವ 500ಕ್ಕೂ ಹೆಚ್ಚು ಪ್ರತಿಭಾವಂತ ಮಕ್ಕಳು ಜ್ಞಾನಾರ್ಜನೆ ಮಾಡುತ್ತಿದ್ದಾರೆ. ಆದರೆ ಈ ಮಕ್ಕಳಿಗೆ ಸುರಕ್ಷಿತ ಮತ್ತು ಸಮಯಕ್ಕೆ ಸರಿಯಾಗಿ ಶಾಲೆಯ ವೇಳೆಗೆ ಬೆಳಿಗ್ಗೆ ತಲುಪಲು ಸಮರ್ಪಕ ಬಸ್ಸುಗಳ ವ್ಯವಸ್ಥೆ ಇರುವುದಿಲ್ಲ ಮತ್ತು ಶಾಲೆ ಬಿಟ್ಟ ನಂತರ ಇವರಿಗೆ ವಾಪಸ್ ಮನೆಗೆ ಹೋಗಲು ಸೂಕ್ತ ಬಸ್ಸುಗಳ ಸೌಲಭ್ಯ ಮತ್ತು ಬಸ್ಸು ತಂಗುದಾಣ ಇಲ್ಲದೆ ರಸ್ತೆಯ ಅರ್ಧ ಭಾಗದಲ್ಲಿ ನಿಂತು ಪ್ರತಿದಿನವೂ…

Read More

ಬೆಳಗಾವಿ ಗಡಿವಿವಾದ ಆತಂಕ ಬೇಡ; ಮಹಾಜನ ವರದಿಯೇ ಅಂತಿಮ: ಸಚಿವ ಎಚ್.ಕೆ.ಪಾಟೀಲ

ಬೆಳಗಾವ ಗಡಿ ವಿವಾದ ಕುರಿತು ಸುಪ್ರೀಂ ಕೋರ್ಟಿನಲ್ಲಿ ನಡೆಯುತ್ತಿರುವ ಪ್ರಕರಣಗಳ ಬಗ್ಗೆ ಕನ್ನಡಿಗರು ಆತಂಕಪಡುವ ಅಗತ್ಯವಿಲ್ಲ. ಗಡಿವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಖಟ್ಲೆಯು ಸಾಂವಿಧಾನಿಕ ವಿಷಯವಾಗಿರುವುದರಿಂದ‌ ಅದನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವ ಬಗ್ಗೆಯೇ ಇದುವರೆಗೆ ನಿರ್ಧಾರವಾಗಿಲ್ಲ ಆದ್ದರಿಂದ ಈ ವಿಷಯದ ಬಗ್ಗೆ ಯಾವುದೇ ರೀತಿಯ ಆತಂಕ ಬೇಡ ಎಂದು ಗಡಿ ಉಸ್ತುವಾರಿ ಸಚಿವರೂ ಆಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ ಗಡಿಭಾಗದ ಕನ್ನಡಪರ ಸಂಘಟನೆಗಳ ಮುಖಂಡರ ಜತೆಗೆ…

Read More