ಸಂಚಾರಿ ಸತ್ಯ

ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ಹಳಿಗೆ ಹಾರಿ ಯುವಕ ಆತ್ಮಹತ್ಯೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಟ್ರ್ಯಾಕ್‌ಗೆ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ದುರದೃಷ್ಟವಶಾತ್ ಮೆಟ್ರೋ ರೈಲಿಗೆ ಸಿಲುಕಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ತಿಳಿದಬಂದಿದೆ. ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಟ್ರೈನ್ ಬರುವಾಗ ಹಳಿಗೆ ಜಿಗಿದು ಪ್ರಾಣಕಳೆದುಕೊಂಡಿದ್ದಾನೆ. ಮೃತ ಯುವಕ ಯಾರು? ಯಾಕಾಗಿ ಆತ್ಮಹತ್ಯೆ ಮಾಡಿಕೊಂಡ ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ…

Read More

ಜಲ ಸಂರಕ್ಷಣೆಗೆ ಜನಜಾಗೃತಿ

ಬೆಂಗಳೂರು: ನೀರಿನ ಸಂರಕ್ಷಣೆ ಹಾಗೂ ಉಳಿತಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮಂಡಳಿಯೊಂದಿಗೆ ಕೈಜೋಡಿಸಿ ಎಂದು ಪ್ಲಂಬರ್‌ಗಳಿಗೆ ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹ‌ರ್ ತಿಳಿಸಿದರು. ಜಯನಗರದ ಸ‌ರ್ ಎಂ.ವಿಶ್ವೇಶ್ವರಯ್ಯ ಮಳೆ ನೀರು ಸುಗ್ಗಿ ಕೇಂದ್ರದಲ್ಲಿ ಆಯೋಜಿಸಿದ್ದ ವಿಶೇಷ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 1000 ಲೀಟರ್ ನೀರನ್ನು ಮನೆಗಳಿಗೆ ಸರಬರಾಜು ಮಾಡಲು ಮಂಡಳಿಗೆ ಸುಮಾರು 95 ರೂ.ಗಳ ವೆಚ್ಚವಾಗುತ್ತದೆ. ಆದರೆ ಜನರಿಗೆ ನಾವು ರಿಯಾಯಿತಿ ದರವಾದ 45 ರೂ.ಗಳಲ್ಲಿ ನೀರನ್ನು ಒದಗಿಸುತ್ತಿದ್ದೇವೆ. ನೀರಿನ…

Read More

Zomatoಗೆ 8.6 ಕೋಟಿ GST ದಂಡದ ನೋಟಿಸ್..!

ಜನಪ್ರಿಯ ಆನ್ ಲೈನ್ ಆಹಾರ ವಿತರಣಾ ಅಪ್ಲಿಕೇಶನ್ ಝೊಮ್ಯಾಟೊಗೆ ಇತ್ತೀಚೆಗೆ ಗುಜರಾತ್ ನ ರಾಜ್ಯ ತೆರಿಗೆ ಉಪ ಆಯುಕ್ತರು ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಗಾಗಿ ದಂಡದ ನೋಟಿಸ್ ನೀಡಿದ್ದಾರೆ. ಸ್ಟಾಕ್ ಎಕ್ಸ್ ಚೇಂಜ್ ಗಳಿಗೆ ನೀಡಿದ ಬಹಿರಂಗಪಡಿಸುವಿಕೆಯ ಪ್ರಕಾರ, ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್ ನ ಅತಿಯಾದ ಬಳಕೆ ಮತ್ತು ಜಿಎಸ್ ಟಿಯ ಕಡಿಮೆ ಪಾವತಿಯಿಂದಾಗಿ ಝೊಮ್ಯಾಟೊ ಬೇಡಿಕೆ ಆದೇಶವನ್ನು ಸ್ವೀಕರಿಸಿದೆ. ಗುಜರಾತ್ ನ ರಾಜ್ಯ ತೆರಿಗೆ ಉಪ ಆಯುಕ್ತರು ಜಿಎಸ್ ಟಿ ರಿಟರ್ನ್ಸ್…

Read More

ಈ ಸಲ ಕಪ್ ನಮ್ದು….! ಇತಿಹಾಸ ಸೃಷ್ಟಿಸಿದ ಆರ್​ಸಿಬಿ ಮಹಿಳಾ ತಂಡ

ಈ ಕ್ಷಣ… ಇದೊಂದು ಕ್ಷಣಕ್ಕಾಗಿ ಆರ್​ಸಿಬಿ (RCB) ಅಭಿಮಾನಿಗಳು ಕಾಯ್ದಿದ್ದು ಬರೋಬ್ಬರಿ 17 ವರ್ಷಗಳು. ಐಪಿಎಲ್ (IPL) ಶುರುವಾಗಿ ಇಲ್ಲಿಯವರೆಗೆ 16 ಆವೃತ್ತಿಗಳು ಕಳೆದಿವೆ. ಪ್ರತಿ ಆವೃತ್ತಿಯಲ್ಲೂ ಬೆಟ್ಟದಷ್ಟು ನಿರೀಕ್ಷೆ ಇಟ್ಟು ಕಾಯುತ್ತಿದ್ದ ಆರ್​ಸಿಬಿ ಅಭಿಮಾನಿಗಳಿಗೆ ಕೊನೆಗೆ ಎದುರಾಗುತ್ತಿದ್ದಿದ್ದು, ಸೋಲಿನ ನಿರಾಸೆ. ಕಳೆದ 16 ಆವೃತ್ತಿಗಳಲ್ಲಿ ಆರ್​ಸಿಬಿ 4 ಬಾರಿ ಫೈನಲ್​ಗೇರಿತ್ತಾದರೂ ಒಮ್ಮೆಯೂ ಟ್ರೋಫಿ ಗೆಲ್ಲಲು ಸಾಧ್ಯವಾಗಲಿಲ್ಲ. ಪ್ರತಿ ಫೈನಲ್‌ ಪಂದ್ಯದಲ್ಲೂ ಆರ್​ಸಿಬಿ ಗೆಲುವಿಗಾಗಿ ಮುಕ್ಕೋಟಿ ದೇವರ ಬಳಿ ಮೊರೆ ಇಡುತ್ತಿದ್ದ ಆರ್​ಸಿಬಿ ಅಭಿಮಾನಿಗಳಿಗೆ ಕೊನೆಗೆ ಎದುರಾಗುತ್ತಿದ್ದಿದ್ದು…

Read More

ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್; ಕರ್ನಾಟಕದಲ್ಲಿ 2 ಹಂತದಲ್ಲಿ ಲೋಕಸಭೆ ಚುನಾವಣೆ? ನಿಮ್ಮ ಕ್ಷೇತ್ರದಲ್ಲಿ ಮತದಾನ ಯಾವಾಗ? ಇಲ್ಲಿದೆ ನೋಡಿ

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮುಂಬರುವ ಲೋಕಸಭೆ ಚುನಾವಣೆ ದಿನಾಂಕವನ್ನು ಶನಿವಾರ ಪ್ರಕಟಿಸಿದರು. ದೇಶದಾದ್ಯಂತ 543 ಲೋಕಸಭಾ ಕ್ಷೇತ್ರಗಳಲ್ಲಿ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 19ರಂದು ಮೊದಲ ಹಂತದ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಲಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ಕೂಡ ಇಂದಿನಿಂದಲೇ ಜಾರಿಗೆ ಬರಲಿದೆ. ಏಪ್ರಿಲ್ 26, ಮೇ 7ರಂದು ಮತದಾನ ಕರ್ನಾಟಕದಲ್ಲಿ ಏಪ್ರಿಲ್ 26ರಂದು ಹಾಗೂ ಮೇ 7ರಂದು ಮತದಾನ ನಡೆಯಲಿದೆ. ಜೂನ್…

Read More

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್‌ ದಾಖಲು

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಬಿಎಸ್​ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ನೀಡಿದ್ದ ದೂರಿನ ಅನ್ವಯ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು. ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಜಿ ಪರಮೇಶ್ವರ, ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದರನ್ನು ಪರಿಗಣಿಸಿ ಪೊಲೀಸರು ಪ್ರಕರಣ…

Read More

ಈ ರಾಜ್ಯಗಳಿಗೆ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಹಲವು ರಾಜ್ಯಗಳಲ್ಲಿ ಮಾರ್ಚ್​ 19ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲದೆ ಗುಡುಗು, ಆಲಿಕಲ್ಲು ಸಹಿತ ಮಳೆಯಾಗಲಿದೆ. ಕೇರಳ, ಮಾಹೆ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಬಿಸಿ ಮತ್ತು ಆರ್ದ್ರ ವಾತಾವರಣ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರಾಖಂಡದಲ್ಲಿ, ಉತ್ತರಾಖಂಡದ ಉತ್ತರಕಾಶಿ, ಚಮೋಲಿ, ಪಿಥೋರಗಢ, ಬಾಗೇಶ್ವರ್ ಮತ್ತು ರುದ್ರಪ್ರಯಾಗ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಕಡಿಮೆ ಮಳೆ, ಹಿಮ ಬೀಳುವ ಮುನ್ಸೂಚನೆ ಇದೆ. ರಾಜ್ಯದ ಉತ್ತರಕಾಶಿ, ಚಮೋಲಿ, ಪಿಥೋರಗಢ, ಬಾಗೇಶ್ವರ ಮತ್ತು…

Read More

Karnataka Budget 2024: ಇದು ಪರಿಪೂರ್ಣ ದೃಷ್ಟಿಯ ಬಜೆಟ್: ಸಚಿವ ಎಂ ಬಿ ಪಾಟೀಲ ಮೆಚ್ಚುಗೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಸಾಮಾಜಿಕ ನ್ಯಾಯ, ಆರ್ಥಿಕ ಅಭಿವೃದ್ಧಿ, ಕೈಗಾರಿಕಾ ಬೆಳವಣಿಗೆ ಮತ್ತು ಪ್ರಾದೇಶಿಕ ತಾರತಮ್ಯ ನಿವಾರಣೆಯ ಹೆಗ್ಗುರಿಗಳನ್ನುಳ್ಳ ಪರಿಪೂರ್ಣ ದೃಷ್ಟಿಯ ಜನಪ್ರಿಯ ಬಜೆಟ್ ಆಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಅದರಲ್ಲೂ ನಮ್ಮ ತವರು ಜಿಲ್ಲೆಯಾದ ವಿಜಯಪುರದ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು, ಇಟ್ಟಂಗಿಹಾಳದ ಬಳಿ ಆಹಾರ ಪಾರ್ಕ್ ಮತ್ತು ಆಲಮಟ್ಟಿಯಲ್ಲಿ ಒಳನಾಡು ಮೀನುಗಾರಿಕೆ ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಘೋಷಿಸಿರುವುದಕ್ಕೆ ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದ ಸಮರ್ಪಿಸುತ್ತೇನೆ…

Read More

ಪೌರಕಾರ್ಮಿಕರಿಗೆ ಪಿಎಫ್ ಬಾಕಿ ಪಾವತಿಸಲು ಬಿಬಿಎಂಪಿಗೆ ಕರ್ನಾಟಕ ಹೈಕೋರ್ಟ್ ಆದೇಶ.

ಬೆಂಗಳೂರು : ಪೌರಕಾರ್ಮಿಕರಿಗೆ 2011 ರ ಜನವರಿಯಿಂದ 2017 ರ ಜುಲೈ ನಡುವಣ ಅವಧಿಯಲ್ಲಿ ನೀಡಬೇಕಿದ್ದ 90,18,89,719 ಭವಿಷ್ಯ ನಿಧಿ (PF) ಬಾಕಿಯನ್ನು ಎಂಟು ವಾರಗಳಲ್ಲಿ ಪಾವತಿಸುವಂತೆ ಬಿಬಿಎಂಪಿಗೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ. ಬಿಬಿಎಂಪಿ ಪೌರಕಾರ್ಮಿಕರ ಸಂಘ ಸಲ್ಲಿಸಿದ್ದ ಅರ್ಜಿಯನ್ನು ಭಾಗಶಃ ಪುರಸ್ಕರಿಸಿ ನ್ಯಾಯಮೂರ್ತಿ ಕೆಎಸ್ ಹೇಮಲೇಖಾ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಉದ್ಯೋಗದಾತರ ಭವಿಷ್ಯ ನಿಧಿ ಮತ್ತು ವಿವಿಧ ನಿಬಂಧನೆಗಳ ಕಾಯಿದೆ, 1952 ರ ಸೆಕ್ಷನ್ 7A ಗೆ ಅನುಗುಣವಾಗಿ ಶೇ 12 ದರದಲ್ಲಿ…

Read More

ವಿಧಾನಸಭೆಯಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಅಂಗೀಕಾರ

ಬೆಂಗಳೂರು, ಫೆ.15: ವಿಧಾನಮಂಡಲ ಬಜೆಟ್ ಅಧಿವೇಶನದ ಐದನೇ ದಿನವಾದ ಇಂದೂ ಕೂಡ ಸದನದಲ್ಲಿ ಕಲಾಪ ಮುಂದುವರೆದಿದೆ. ಹಲವು ವಿಚಾರಗಳ ಬಗ್ಗೆ ವಿಪಕ್ಷ ಹಾಗೂ ಪ್ರತಿಪಕ್ಷ ನಡುವೆ ಆರೋಪ ಪ್ರತ್ಯಾರೋಪಕ್ಕೆ ಸದನ ಸಾಕ್ಷಿಯಾಗಿದೆ. ಸದ್ಯ ವಿಧಾನಸಭೆ ಕಲಾಪದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ ಅಂಗೀಕಾರವಾಗಿದೆ. ಸುಗ್ರೀವಾಜ್ಞೆಯನ್ನು (Kannada signage ordinance) ರಾಜ್ಯಪಾಲರು ವಾಪಸಾತಿ ಮಾಡಿ ಸದನದಲ್ಲಿ ವಿಧೇಯಕ ಮಂಡಿಸುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ವಿಧೇಯಕ ಮಂಡಿಸಿ ಸರ್ಕಾರ ಅಂಗೀಕಾರ ಪಡೆದಿದೆ. ಅಂಗಡಿ-ಮುಂಗಟ್ಟುಗಳ ಮುಂದೆ ಸೂಚನಾ ಫಲಕಗಳಲ್ಲಿ ಶೇ…

Read More