ಸಂಚಾರಿ ಸತ್ಯ

ರಾಮದುರ್ಗ ವಿಧಾನಸಭಾ ಮತಕ್ಷೇತ್ರMLC ಅನುದಾನದ ಅಡಿ 49 ಲಕ್ಷ ರೂ. ಯೋಜನೆ ಕಾಮಗಾರಿಗಳಿಗೆ ಬೆಳಗಾವಿ ವಿಧಾನ ಪರಿಷತ್ ಸದಸ್ಯರು ಚನ್ನರಾಜ ಹಟ್ಟಿಹೊಳಿ ಭೂಮಿ ಪೂಜಾ ನೆರವೇರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವಿಧಾನಸಭಾ ಮತಕ್ಷೇತ್ರ MLC ಅನುದಾನದ ಅಡಿ 49 ಲಕ್ಷ ರೂ. ಯೋಜನೆಯ ವಿವಿಧ ಕಾಮಗಾರಿಗಳಿಗೆ ಬೆಳಗಾವಿ ವಿಧಾನ ಪರಿಷತ್ ಸದಸ್ಯರು ಚನ್ನರಾಜ ಹಟ್ಟಿಹೊಳಿ ಭೂಮಿ ಪೂಜಾ ನೆರವೇರಿಸಿ ಮಾತನಾಡಿದರು. ರಾಮದುರ್ಗ ಪಟ್ಟಣದ ಗಾಂಧಿ ನಗರದ ಬಸವೇಶ್ವರ ದೇವಸ್ಥಾನ ಸಮುದಾಯ ಭವನ ನಿರ್ಮಾಣಕ್ಕೆ 10 ಲಕ್ಷ ರೂಪಾಯಿ,ಅಂಜುಮನ್ ಪ್ರೌಢಶಾಲೆಯ ಮೊದಲನೇ ಮಹಡಿಯ ಕಾಮಗಾರಿಗೆ 10 ಲಕ್ಷ ರೂಪಾಯಿ,ರಾಮದುರ್ಗ ತಾಲ್ಲೂಕಿನ ಸುನ್ನಾಳ ಪುನರ್ವಸತಿ ಕೇಂದ್ರದಲ್ಲಿ ಸೋಮಪ್ಪ ಸಿನ್ನಾಳ ಇವರ ಮನೆಯಿಂದ ಗುರನಗೌಡ ಪಾಟೀಲ ಇವರ…

Read More

ಕಬ್ಬು ಸಾಗಿಸುವ ವಾಹನಗಳಲ್ಲಿ‌ ಸುರಕ್ಷತಾ ಮುನ್ನೆಚ್ಚರಿಕೆಯಾಗಿ ಪ್ರತಿಫಲಿತ ಬ್ಯಾನರ್‌ಗಳನ್ನು ಹಾಕಲು ಅರಿವು ಮೂಡಿಸುವ ಕಾರ್ಯಕ್ರಮ

ಗೋಕಾಕ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ‌ ಕಬ್ಬು ಸಾಗಿಸುವ ಟ್ರಾಕ್ಟರ್‌ಗಳಿಂದ ರಸ್ತೆ ಅಪಘಾತಗಳನ್ನು ಕಡಿಮೆ ಮಾಡಲು ಟ್ರ್ಯಾಕ್ಟರ್ ಚಾಲಕರಿಗೆ ಸಂಚಾರ ನಿಯಮಗಳ ಪಾಲನೆಯ ಬಗ್ಗೆ ಮತ್ತು ಕಬ್ಬು ಸಾಗಿಸುವ ವಾಹನಗಳಲ್ಲಿ‌ ಸುರಕ್ಷತಾ ಮುನ್ನೆಚ್ಚರಿಕೆಯಾಗಿ ಪ್ರತಿಫಲಿತ ಬ್ಯಾನರ್‌ಗಳನ್ನು ಹಾಕಲು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Read More

ಖಾನಪೇಟೆದ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ನೂತನ ಕಾರ್ಯಾಲಯವನ್ನು ಶ್ರೀಗಳು ಹಾಗೂ ಗಣ್ಯರು ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಟೆದಲ್ಲಿ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ನೂತನ ಕಾರ್ಯಾಲಯದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಪಾಲ್ಗೊಂಡು ಅವರು ಮಾತನಾಡಿದರು.ರಾಜ್ಯದಲ್ಲಿಯೇ ನಮ್ಮ ಕಾರ್ಖಾನೆಯನ್ನು ಮಾದರಿ ಕಾರ್ಖಾನೆಯನ್ನಾಗಿ ಮಾಡಬೇಕೆಂಬ ಸದಿಚ್ಚೆಯೊಂದಿಗೆ ಶ್ರಮಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಕಾರ್ಖಾನೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗುವದು ಎಂದರು.ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ ಮಾತನಾಡಿ, ರೈತರ ಹಾಗೂ ಕಾರ್ಖಾನೆಯ ಶೇರುದಾರರ ಹಿತಕಾಯಲು ನಾವು ಬದ್ಧರಾಗಿದ್ದೇವೆ. ರೈತರ ಯೋಗಕ್ಷೇಮ ಮತ್ತು ಅವರ ಕಷ್ಟಗಳನ್ನು ಆಲಿಸಲು…

Read More

ಬೆಟಗೇರಿ ಪ್ರೌಢ ಶಾಲೆಯಲ್ಲಿ ನೂತನ ಶಾಲಾ ಕೊಠಡಿಗಳಿಗೆ ಭೂಮಿಪೂಜೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಡಿ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ನ.೧೨ರಂದು ನೂತನ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ಕಾರ್ಯಕ್ರಮ ನಡೆಯಿತು.ಬೆಳಗಾವಿ ಜಿಲ್ಲಾ ಪಂಚಾಯತ, ಚಿಕ್ಕೋಡಿ ಪಂಚಾಯತ ರಾಜ್ ಇಂಜನೀಯರಿಂಗ್ ವಿಭಾಗ ಹಾಗೂ ಗೋಕಾಕ ಸಹಾಯಕ ಕಾರ್ಯಕಾರಿ ಅಭಿಯಂತರರು ಪಂಚಾಯತ ರಾಜ್ ಇಂಜನೀಯರಿಂಗ್ ಉಪವಿಭಾಗದ ಸಹಯೋಗದಲ್ಲಿ ಸನ್೨೦೨೨-೨೩ನೇ ಸಾಲಿನ ಕೇಂದ್ರ ಯೋಜನಾ ಅನುಮೋದನಾ ಮಂಡಳಿ(ಪಿಎಬಿ)ವಾರ್ಷಿಕ ಕ್ರೀಯಾ ಯೋಜನೆಯಡಿಯ ಸುಮಾರು ೬೭ ಲಕ್ಷ ರೂ.ಗಳ ಅನುದಾನದಡಿಯಲ್ಲಿ ನೂತನ ೪ ಶಾಲಾ ಕೊಠಡಿ ನಿರ್ಮಾಣ ಮಾಡಲಾಗುವುದು…

Read More

ಡಾ.ಬೆಟಗೇರಿ ಕೃಷ್ಣಶರ್ಮರ ದಿವ್ಯ ಸ್ಮರಣೋತ್ಸವ ಸಮಾರಂಭ

ಬೆಟಗೇರಿ:ಆನಂದಕಂದ ಕಾವ್ಯನಾಮದಿಂದ ಚಿರಪರಿತರಾಗಿರುವ ಡಾ.ಬೆಟಗೇರಿ ಕೃಷ್ಣಶರ್ಮರು ನಾಡಿನ ಶ್ರೇಷ್ಠ ಸಾಹಿತಿಯಾಗಿದ್ದರು. ಇಂದು ಪ್ರತಿಯೊಬ್ಬರೂ ಸಾಹಿತ್ಯಾಭಿರುಚಿ ಮತ್ತು ಕನ್ನಡಾಭಿಮಾನ ಬೆಳಸಿಕೊಳ್ಳಬೇಕು. ಡಾ.ಬೆಟಗೇರಿ ಕೃಷ್ಣಶರ್ಮರು ಅಪ್ಪಟ ದೇಶಿ ಕವಿಯಾಗಿದ್ದರು ಎಂದು ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಶ್ರೀ ಗಜಾನನ ವೇದಿಕೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನ.೯ರಂದು ನಡೆದ…

Read More

ಕಾಂಗ್ರೆಸ್ ಮಾತ್ರ ಶೋಷಿತರ ರಕ್ಷಣೆ ಮಾಡುತ್ತದೆ : ಜ್ಯೋತಿ ಗೊಂಡಬಾಳ

ಕೊಪ್ಪಳ: ಐದು ಪ್ರಮುಖ ಸಮಾಜಮುಖಿ ಯೋಜನೆಗಳಾದ ಗೃಹಲಕ್ಷ್ಮೀ, ಶಕ್ತಿ, ಯುವನಿಧಿ, ಅನ್ನಭಾಗ್ಯ ಮತ್ತು ಗೃಹಜ್ಯೋತಿ ಎಂಬ ಗ್ಯಾರಂಟಿಗಳ ಮೂಲಕ ಹಿಂದುಳಿದ, ಬಡವರ ಕಲ್ಯಾಣ ಮತ್ತು ಬದುಕಿಗೆ ಶಕ್ತಿ ನೀಡಿದ ಸಿದ್ದರಾಮಯ್ಯ ಸರಕಾರಕ್ಕೆ ಮತ್ತಷ್ಟು ಶಕ್ತಿ ನೀಡಲು ಅನ್ನಪೂರ್ಣ ತುಕಾರಾಂ ಅವರನ್ನು ಗೆಲ್ಲಿಸಬೇಕು ಎಂದು ಗ್ಯಾರಂಟಿ ಸಮಿತಿ ಸದಸ್ಯೆ, ಕಾಂಗ್ರೆಸ್ ನಾಯಕಿ ಜ್ಯೋತಿ ಎಂ. ಗೊಂಡಬಾಳ ಮನವಿ ಮಾಡಿದರು.ಅವರು ಸಂಡೂರು ವಿಧಾನಸಭಾ ಕ್ಷೇತ್ರದ ಅಂತಾಪುರದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದರು. ನಾಡು ಕಂಡ ಶ್ರೇಷ್ಠ ಮುಖ್ಯಮಂತ್ರಿಯಲ್ಲಿ ಸಿದ್ದರಾಮಯ್ಯ ಅವರು…

Read More

ಬೆಟಗೇರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದÀಲ್ಲಿ ನ.9ರಂದು ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಅದ್ಧೂರಿಯಾಗಿ ಜರುಗಿತು.ಗ್ರಾಮದ ವಿವಿಧ ವೃತ್ತದಲ್ಲಿರುವ ಪುತ್ಥಳಿಗಳಿಗೆ ಪೂಜೆ, ಪುಷ್ಪಾರ್ಪಣೆ ಸಮರ್ಪಣೆ ಸ್ಥಳೀಯ ಕರವೇ ಕಾರ್ಯಕರ್ತರ ನೇತೃತ್ವದಲ್ಲಿ ನಡೆದ ಬಳಿಕ ಇಲ್ಲಿಯ ಅಶ್ವಾರೂಢ ಬಸವೇಶ್ವರ ವೃತ್ತದಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಶಾಲಾ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ವಿವಿಧ ರೂಪಕಗಳ, ಜಾನಪದ ಕಲಾತಂಡಗಳು…

Read More

ಬೆಟಗೇರಿ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಂದ ವಾಗ್ದಾನ..!

ಶಾಲೆಯ ನೋಟಿಸ್ ಫಲಕದ ಮೇಲೆ ವಿದ್ಯಾರ್ಥಿ ಭಾವಚಿತ್ರ*ಶಿಕ್ಷಕರಿಂದ ವಿಶೇಷ ಪಾಠ ಪ್ರವಚನ ಬೆಟಗೇರಿ:ಶಿಕ್ಷಕರಿಂದ ವಿಶೇಷ ಗಮನ… ಪಾಠ ಪ್ರವಚನ… ವಿದ್ಯಾರ್ಥಿಗಳಿಂದ ವಾಗ್ದಾನ.., ಫಲಿಂತಾಂಶ ಸುಧಾರಣೆೆಗೆ ಪ್ರೇರಣೆ… ಇದೇನು.? ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ಗ್ರಾಮದ ವಿ.ವಿ.ಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ವಾಗ್ದಾನ ಎಂಬ ವಿನೂತನ ವಿಶೇಷ ಕಾರ್ಯಕ್ರಮ ನ.೭ರಂದು ನಡೆಯಿತು.ಶಾಲೆಯ ಮುಖ್ಯಾಧ್ಯಾಪಕ, ಸಹಶಿಕ್ಷಕರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉತ್ಸಾಹ ತುಂಬಲು ವಿದ್ಯಾರ್ಥಿಗಳಿಂದ ವಾಗ್ದಾನ ಎಂಬ ವಿನೂತನ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು ಸ್ವ ಸಾಮಥ್ಯದ ಶೇ೭೫, ಶೇ೮೦,…

Read More

ಬೆಂಗಳೂರುನ 18,000 ಎಕ್ರೆ ಜಮೀನಿನಲ್ಲಿ ಉಪನಗರ ಯೋಜನೆ: ವ್ಯಾಪಕ ಆಕ್ರೋಶ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ರೈತರ ಜಮೀನಿನಲ್ಲಿ ಉಪನಗರ ನಿರ್ಮಿಸಲು ಮುಂದಾಗಿದೆ. ಆದರೆ ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದು ರೈತ ವಿರೋಧಿ ನಿರ್ಧಾರ, ಕೂಡಲೇ ಈ ಯೋಜನೆಯನ್ನು ಕೈಬಿಡಬೇಕು ಎಂಬ ಒತ್ತಡಗಳು, ಆಗ್ರಹಗಳು ಹೆಚ್ಚಾಗಿವೆ. ರೈತರ ಕೃಷಿ ಜಮೀನಿನಲ್ಲಿ ಉಪನಗರ ನಿರ್ಮಾಣಕ್ಕೆ ಕೈಹಾಕಿ ಉಪ ಚುನಾವಣೆ ಹೊತ್ತಲ್ಲಿ ಸರ್ಕಾರ ಕೈಸುಟ್ಟುಕೊಂಡಿತೆ ಎನ್ನಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ನಂದಗುಡಿ, ಸೂಲಿಬೆಲೆ ಹೋಬಳಿಗಳ 36 ಗ್ರಾಮಗಳ 18,000 ಎಕರೆ ಕೃಷಿ ಭೂಮಿಯಲ್ಲಿ ಉಪನಗರ ನಿರ್ಮಿಸಲು ನಿರ್ಧಾರ…

Read More

ಸಿಂಗಲ್ ಸೈಟ್ ಗಳಿಗೆ ಬಿಬಿಎಂಪಿ ಎ ಅಥವಾ ಬಿ ಖಾತೆ ಸ್ಥಗಿತ; ಬಿಡಿಎ ಒಪ್ಪಿಗೆ ಇದ್ರೆ ಮಾತ್ರ ಖಾತಾ!

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ವತಿಯಿಂದ ಅಂಗೀಕಸಲ್ಪಡದೆ ಇರುವ ಬಡಾವಣೆಗಳಲ್ಲಿನ ಸಿಂಗಲ್ ಸೈಟ್ ಗಳಿಗೆ ‘A’ ಅಥವಾ ‘B’ ಖಾತೆ (ಏಕ ನಿವೇಶನ ಸ್ವತ್ತು) ನೀಡುವ ಪದ್ಧತಿಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನಿಲ್ಲಿಸಿರುವುದಾಗಿ ಪ್ರಕಟಿಸಿದೆ. ಒಂದು ವೇಳೆ, ಕೃಷಿಯೇತರ ಚಟುವಟಿಕೆಗಳಿಗಾಗಿ ಭೂಪರಿವರ್ತನೆ ಮಾಡಲಾಗಿದ್ದರೂ ಆ ಭೂಮಿಯಲ್ಲಿರುವ ಯಾವುದೇ ಸಿಂಗಲ್ ಸೈಟ್ ಗೆ ಎ ಖಾತೆ ಅಥವಾ ಬಿ ಖಾತೆಯನ್ನು ನೀಡುವುದನ್ನು ನಿಲ್ಲಿಸಿರುವುದಾಗಿ ಬಿಬಿಎಂಪಿ ಸ್ಪಷ್ಟಪಡಿಸಿದೆ. ಇತ್ತೀಚೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಬಿಬಿಎಂಪಿಗೆ…

Read More