
ಕ್ಷೇತ್ರ ಮಟ್ಟದಲ್ಲಿನ ಅಧಿಕಾರಿ ಸಿಬ್ಬಂದಿಗಳು ಕಂದಾಯ ಇಲಾಖೆ ಸೈನಿಕರು;ಬಾಕಿ ಇರುವ ಸೌಲಭ್ಯ ನೀಡಲು ಬದ್ಧ: ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ನೌಕರರಿಗೆ ಕಾಲಮಿತಿ ಬಡ್ತಿ ಆದೇಶ ಪತ್ರಗಳನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭುವಿತರಿಸಿ, ಮಾತನಾಡಿದರು. ಕಂದಾಯ ಇಲಾಖೆಗೆ ಇಡೀ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಸ್ಥಾನವಿದ್ದು, ಮಾತೃ ಇಲಾಖೆ ಆಗಿದೆ. ಇಲಾಖೆಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರ ಕ್ಷೇಮ, ಸಂತೋಷ ಮುಖ್ಯವಾಗಿದೆ. ಎಲ್ಲರೂ ಸಂತೋಷದಿಂದ ಕೆಲಸ ಮಾಡಿದರೆ ನಿಷ್ಪಕ್ಷಪಾತವಾಗಿ, ತ್ವರಿತವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ತಮ್ಮ ಬೇಡಿಕೆಗಳಲ್ಲಿ ಜಿಲ್ಲಾ ಹಂತದ ಪರಿಹರಿಸುವ ಪ್ರಕರಣಗಳನ್ನು ಆದ್ಯತೆ ಮೇಲೆ ವಿಲೇವಾರಿ ಮಾಡಲಾಗುತ್ತದೆ ಎಂದು ಹೇಳಿದರು….