ಬೀದರ್ 3,99,534 ರೂ. ಮೌಲ್ಯದ ಅಧಿಕ ಅಕ್ರಮ ಪಡಿತರ ಅಕ್ಕಿ ಜಪ್ತಿ

ಬೀದರ್‌ ಪಟ್ಟಣದ ಹಳೆ ನಾವದಗೇರಿಯ ಶೆರ್ಟ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿರುವ 3,99,534 ರೂ. ಮೌಲ್ಯದ ಸುಮಾರು 117 ಕ್ವಿಂಟಲ್ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೋಮವಾರ ಅನೌಪಚಾರಿಕ ಪಡಿತರ ಪ್ರದೇಶದ ಆಹಾರ ನಿರೀಕ್ಷಕ ಉಪನಿರ್ದೇಶಕರು ಹಾಗೂ ಜಿಲ್ಲಾ ಆಹಾರ ನಿರೀಕ್ಷಕರಿಗೆ ಈ ಬಗ್ಗೆ ಮಾಹಿತಿ ನೀಡಿ, ನಗರದ ಹಳೆ ನಾವದಗೇರಿ ಹತ್ತಿರ…

Read More

ಬೂದಿಹಾಳ ಚೆಕ್ ಪೋಸ್ಟ್ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 182.90 ಕ್ವಿಂಟಲ್ ಪಡಿತರ ಅಕ್ಕಿಯನ್ನು ಪೊಲೀಸ ಹಾಗೂ ಆಹಾರ ಇಲಾಖೆ ಜಪ್ತಿ ಮಾಡಿರುತ್ತಾರೆ

ಗದಗ್ ಜಿಲ್ಲಾ ನರಗುಂದ ತಾಲೂಕಿನ ಕೊಣ್ಣೂರ ಬಳಿ ಬೂದಿಹಾಳ ಚೆಕ್ ಪೋಸ್ಟ್ನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 182.90 ಕ್ವಿಂಟಲ್ ಪಡಿತರ ಅಕ್ಕಿಯನ್ನು ನರಗುಂದ ಪೊಲೀಸರು ಹಾಗೂ ಆಹಾರ ನಿರೀಕ್ಷರು ಮಂಗಳವಾರ ವಶಪಡಿಸಿಕೊಂಡಿದ್ದಾರೆ. ಯಲಬುರ್ಗಾ ತಾಲ್ಲೂಕಿನ ಪುಟಗಮಮರಿ ನಿರಂಜನಯ್ಯ ಕಂಟಿಬಸಯ್ಯ ನಂದಾಪುರ ಎಂಬ ವ್ಯಕ್ತಿ ಕ್ಯಾಂಟರ್ ವಾಹನದಲ್ಲಿ ಗಜೇಂದ್ರಗಡದಿಂದ ಕೊಣ್ಣೂರ ಮಾರ್ಗವಾಗಿ ಬೆಳಗಾವಿ ಜಿಲ್ಲೆ ಹುಕ್ಕೇರಿಗೆ ಮಾರಾಟ ಮಾಡಲು ಅಕ್ರಮವಾಗಿ ಸಾಗಿಸುತ್ತಿದ್ದ ಸಂದರ್ಭದಲ್ಲಿ ಪೊಲೀಸರ ಕೈಗೆ ವಾಹನ ಸಮೇತ ಸಿಕ್ಕಿ ಬಿದ್ದಿದ್ದಾನೆ. ಈ ಕುರಿತು ಮಾಹಿತಿ ನೀಡಿದ ಆಹಾರ…

Read More

ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ : ಆಹಾರ ಇಲಾಖೆಯಿಂದ ದಾಳಿ ನಡೆಸಿ 515 ಕ್ವಿಂಟಾಲ್ ಪಡಿತರ ಅಕ್ಕಿ ಹಾಗೂ 6 ವಾಹನಗಳು ಜಪ್ತಿ

ಕಲಬುರಗಿ ಜಿಲ್ಲೆಯಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಸಾಗಾಟ ಮಾಡುತ್ತಿರುವಾಗ ಖಚಿತ ಮಾಹಿತಿ ಮೇರೆಗೆ ದೂರು ಬಂದ ಆಧಾರದ ಮೇಲೆ ದಾಳಿ ಮಾಡಿ 17,70,275 ರೂ. ಮೌಲ್ಯದ ಒಟ್ಟು 515 ಕ್ವಿಂಟಾಲ್ ಪಡಿತರ ಅಕ್ಕಿ ಹಾಗೂ 6 ವಾಹನಗಳನ್ನು ಜಪ್ತಿ ಮಾಡಿ ಈ ಕೃತ್ಯಗಳಲ್ಲಿ ಭಾಗಿಯಾದ 18 ಜನ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕಲಬುರಗಿ ಆಹಾರ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಪಡಿತರ ಚೀಟಿದಾರರಿಗೆ ಹಂಚಿಕೆಯಾಗಿರುವ ಅಕ್ಕಿಯನ್ನು ಅಕ್ರಮವಾಗಿ ಖರೀದಿ ಮಾಡಿ…

Read More

ಶಿಂದೋಗಿಯ ನೂತನ ಗ್ರಾಮ ಪಂಚಾಯತ ಸಭಾ ಭವನವನ್ನು ಶಾಸಕ ವಿಶ್ವಾಸ ವೈದ್ಯ ಅವರು ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿಂದೋಗಿಯ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ನೂತನವಾಗಿ ನಿರ್ಮಿಸಿದ ಸಭಾ ಭವನವನ್ನು ಸವದತ್ತಿ-ಯಲ್ಲಮ್ಮ ಮತಕ್ಷೇತ್ರದ ಜನಪ್ರಿಯ ಶಾಸಕ ವಿಶ್ವಾಸ ವೈದ್ಯ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ವತಿಯಿಂದ ಶಾಸಕ ವಿಶ್ವಾಸ ವೈದ್ಯರಿಗೆ ಸನ್ಮಾನ ಮಾಡಿದರು .ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ .ಅಧ್ಯಕ್ಷಾದ ಡಿ.ಡಿ.ಟೋಪೋಜಿ ,ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣಾಭಿವೃದ್ದಿ ಅಧಿಕಾರಿಗಳು,ನರೇಗಾ ಅಧಿಕಾರಿಗಳು, ಗ್ರಾಮ ಪಂಚಾಯಿತಿ , ಸರ್ವ ಸದಸ್ಯರು, ಅಭಿವೃದ್ದಿ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ವಿಶ್ವ ಕ್ಷಯರೋಗ ದಿನಾಚರಣೆ ಹಾಗೂ ಕ್ಷಯ ಮುಕ್ತ ಗ್ರಾಮ ಪಂಚಾಯಿತಿಗಳ ಸತ್ಕಾರ ಸಮಾರಂಭ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಉದ್ಘಾಟಿಸಿದರು.

ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಆರೋಗ್ಯ ಅಭಿಯಾನದಲ್ಲಿ ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನಾ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ವಿಶ್ವ ಕ್ಷಯರೋಗ ದಿನಾಚರಣೆ ಹಾಗೂ ಕ್ಷಯ ಮುಕ್ತ ಗ್ರಾಮ ಪಂಚಾಯಿತಿಗಳ ಸತ್ಕಾರ ಸಮಾರಂಭವನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಉದ್ಘಾಟಿಸಿ, ಮಾತನಾಡಿದರು. ವಿಶ್ವ ಆರೋಗ್ಯ ಸಂಸ್ಥೆಯು 2030 ರ ವೆಳೆಗೆ ಇಡೀ ವಿಶ್ವವನ್ನು ಕ್ಷಯರೋಗದಿಂದ ಮುಕ್ತಗೊಳಿಸುವ ಘೋಷಣೆ ಮಾಡಿದೆ. ಈ ನಿಟ್ಟಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ 35 ಗ್ರಾಮ…

Read More

ಬೆಳಗಾವಿ ಎಸ್.ಸಿ-ಎಸ್.ಟಿ ಅನುದಾನ ದುರ್ಬಳಕೆ ತಡೆಗೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಎಸ್.ಸಿ-ಎಸ್.ಟಿ ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು.ಎಸ್.ಸಿ-ಎಸ್.ಟಿ ಅನುದಾನ ದುರ್ಬಳಕೆಯಾಗುತ್ತಿರುವ ಸಾಕಷ್ಟು ಆರೋಪಗಳು ಕೇಳಿ ಬರುತ್ತಿದ್ದು, ಗ್ರಾಮ ಪಂಚಾಯತಿ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಾಲಿಕೆಯಲ್ಲಿ ಎಸ್.ಸಿ.ಪಿ- ಟಿ.ಎಸ್.ಪಿ ಅನುದಾನ ದುರ್ಬಳಕೆಯಾಗದಂತೆ ನಿಗದಿತ ಅವಧಿಯೊಳಗೆ ಸಮರ್ಪಕ ಬಳಕೆಯಾಗಬೇಕು. ಒಂದುವೇಳೆ ದುರ್ಬಳಕೆ ಪ್ರಕರಣ ಕಂಡು ಬಂದಲ್ಲಿ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಎಚ್ಚರಿಕೆ ನೀಡಿದರು….

Read More

ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ -1ಜಿಲ್ಲಾ ವೆಬ್‍ಕಾಸ್ಟಿಂಗ್ ಕೇಂದ್ರಕ್ಕೆ ಡಿ.ಸಿ., ಸಿಇಓ ದಿಡೀರ್ ಭೇಟಿ; ಪರೀಕ್ಷೆಗಳ ಲೈವ್ ಸ್ಟ್ರೀಮಿಂಗ್ ವೀಕ್ಷಣೆ

ದಾರವಾಡ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ-1 ರ ಎರಡನೇಯ ದಿನವಾದ ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳು ಗಣಿತ ವಿಷಯ ಪರೀಕ್ಷೆ ಬರೆಯುತ್ತಿದ್ದಾರೆ.ಜಿಲ್ಲಾ ಪಂಚಾಯತ ಮೂರನೇ ಮಹಡಿಯಲ್ಲಿ ಸ್ಥಾಪಿಸಿರುವ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಪರೀಕ್ಷಾ ಕೇಂದ್ರ ಹಾಗೂ ಪರೀಕ್ಷಾ ಕೊಠಡಿಗಳ ನೇರ ವೀಕ್ಷಣೆಗೆ ಸ್ಥಾಪಿಸಿರುವ ಜಿಲ್ಲಾ ವೆಬ್‍ಕಾಸ್ಟಿಂಗ್ ಕೇಂದ್ರಕ್ಕೆ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ ಅವರು ದಿಢೀರ್ ಭೇಟಿ ನೀಡಿ ಪರೀಕ್ಷಾ ಕೊಠಡಿಗಳ ಲೈವ್ ಸ್ಟ್ರೀಮಿಂಗ್ ವೀಕ್ಷಿಸಿದರು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ನಿಯಮಾನುಸಾರ…

Read More

ಸವದತ್ತಿ ಬೃಹತ್ ಆರೋಗ್ಯ ಮೇಳವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.

ಬೆಳಗಾವಿ, ಬೃಹತ್ ಆರೋಗ್ಯ ಮೇಳದಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆ, ಖಾಸಗಿ ಆಸ್ಪತ್ರೆಗಳು ಭಾಗವಹಿಸಿವೆ. ರಾಜ್ಯದ ವಿವಿಧೆಡೆಯಿಂದ ಚಿಕಿತ್ಸೆ ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಶಿಕ್ಷಣ ಆರೋಗ್ಯ ಕ್ಷೇತ್ರಕ್ಕೆ ಸರ್ಕಾರ ಹೆಚ್ಚು ಒತ್ತು ನೀಡುತ್ತಿದೆ. ಜನರಿಗೆ ಖಾಸಗಿ ಆಸ್ಪತ್ರೆಗಳ ಮಾದರಿಯಲ್ಲಿ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಮೇಳ ಆಯೋಜನೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆಡಳಿತ,…

Read More

ಎನ್.ಎಸ್.ಎಸ್ ಶಿಬಿರದ ಉದ್ಘಾಟನಾ ಸಮಾರಂಭವನ್ನು ನೆರವೇರಿಸಲಾಯಿತು.

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, ಸಂಯೋಜಿತಜನತಾ ಶಿಕ್ಷಣ ಪ್ರಸಾದಕ ಸಂಘದಅಜ್ಜಪ್ಪ ಗಡಮಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ಮುನವಳ್ಳಿ.ಗ್ರಾಮ ಪಂಚಾಯತಿ ತಗ್ಗಿಹಾಳದತ್ತು ಗ್ರಾಮ ಜಕಬಾಳ ದಲ್ಲಿರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ -2024-25ಶಿಬಿರದ ಸ್ಥಳ- ಸರ್ಕಾರಿ ಪ್ರಾಥಮಿಕ ಶಾಲೆ ಆವರಣ, ಜಕಬಾಳ. 20-03-2025 ಗುರುವಾರ ದಂದು ಜರುಗಿಸಲಾಯಿತು.ಈ ಕಾರ್ಯಕ್ರಮದದಿವ್ಯ ಸಾನಿಧ್ಯ :- ಶ್ರೀ ಮ.ನ. ಪ್ರ. ಸ್ವ ಮುರಘೇಂದ್ರ ಮಹಾಸ್ವಾಮಿಗಳು ಶ್ರೀ ಸೋಮಶೇಖರ್ ಮಠ ಮುನವಳ್ಳಿಅಧ್ಯಕ್ಷತೆ :- ಶ್ರೀ ಎಂ ಆರ್ ಗೋಪಶೆಟ್ಟಿ….

Read More

ಡಾ| ಬಾಬು ಜಗಜೀವನರಾಮ್ ಹಾಗೂ ಅಂಬೇಡ್ಕರ ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡಿದರು.

ರಾಮದುರ್ಗ ಏ.5 ರಂದು ಡಾ| ಬಾಬು ಜಗಜೀವನ್‌ರಾಮ್ ಹಾಗೂ ಸಂವಿಧಾನಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ ಜಯಂತಿಯನ್ನು ಏ.14 ರಂದು ತಾಲೂಕಾಡಳಿತ ಹಾಗೂ ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಆಚರಣೆ ಮಾಡಲು ರಾಮದುರ್ಗ ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಏರ್ಪಡಿಸಿದ ಪೂರ್ವಭಾವಿ ಸಭೆಯಲ್ಲಿ ನಿರ್ಣಯಿಸಲಾಯಿತು.ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಸರಕಾರದ ನಿರ್ದೇಶನದಂತೆ ಎಲ್ಲಾ ಸರಕಾರಿ ಕಛೇರಿಗಳಲ್ಲಿ ಅಂಬೇಡ್ಕರ ಹಾಗೂ ಜಗಜೀವನ್‌ರಾಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಆಚರಣೆ ಮಾಡಿದ ನಂತರ ತಹಶೀಲ್ದಾರ ಕಾರ್ಯಾಲಯದಲ್ಲಿ…

Read More