ಕಿತ್ತೂರು ಉತ್ಸವದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸಲಿರುವ ಜ್ಯೋತಿಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ ಚಾಲನೆ ನೀಡಿದರು.

WhatsApp Group Join Now

ಬೆಂಗಳೂರು ವಿಧಾನಸೌಧ ಆವರಣದಲ್ಲಿ ಕಿತ್ತೂರು ವಿಜಯೋತ್ಸವದ ಜ್ಯೋತಿ” ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಿ ಮಾತನಾಡಿದರು. ಇಲ್ಲಿಂದ ಹೊರಟ ಜ್ಯೋತಿ ಎಲ್ಲಾ ಜಿಲ್ಲೆಗಳನ್ನು ಹಾದು ಕಿತ್ತೂರು ತಲುಪಲಿದೆ.

ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ. ಸಂಗೊಳ್ಳಿ ರಾಯಣ್ಣ ಕೂಡ ರಾಣಿ ಚನ್ನಮ್ಮ ಅವರ ಸೈನ್ಯದಲ್ಲಿದ್ದರು. ಬ್ರಿಟೀಷರಿಗೆ ತೆರಿಗೆ ಕೊಡಲು ವಿರೋಧಿಸಿ ವಿರೋಚಿತವಾಗಿ ಹೋರಾಡಿದ ದೇಶಪ್ರೇಮಿಗಳು ಇವರು ಎಂದರು.

ನಾಡಪ್ರೇಮ, ದೇಶಪ್ರೇಮ, ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ರಾಣಿ ಚನ್ನಮ್ಮ. ಕಿತ್ತೂರಿನಲ್ಲಿ ಆಚರಿಸಲ್ಪಡುತ್ತಿರುವ ಕಿತ್ತೂರು ಉತ್ಸವಕ್ಕೆ ಮತ್ತು ಕಿತ್ತೂರಿನ‌ ಅಭಿವೃದ್ಧಿಗೆ ಸರ್ಕಾರ ಸಕಲ ನೆರವನ್ನು ನೀಡುತ್ತಿದೆ. ಅಗತ್ಯ ಅನುದಾನವನ್ನೂ ನೀಡುತ್ತಿದೆ.

ಅಕ್ಟೋಬರ್ 2 ಮಹಾತ್ಮ ಗಾಂಧಿಯವರ ಜಯಂತಿ. ಜೊತೆಗೆ ಲಾಲ್ ಬಹದ್ದೂರು ಶಾಸ್ತ್ರಿ ಅವರ ಜನುಮದಿನವೂ ಹೌದು. ಗಾಂಧಿ ನಡಿಗೆ ಮೂಲಕ ಗಾಂಧಿ ತತ್ವಾದರ್ಶಗಳು ಇವತ್ತಿನ ಯುವ ಪೀಳಿಗೆಗೆ ತಲುಪಿಸುವ ಪ್ರಯತ್ನ ಮಾಡಿದ್ದೇವೆ ಎಂದರು.

ಗಾಂಧೀಜಿಯವರು ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ನೇತೃತ್ವ ವಹಿಸಿ ಶಾಂತಿಯುತವಾಗಿ ಸ್ವಾತಂತ್ರ್ಯ ದೊರಕಿಸಿಕೊಟ್ಟರು. 1920 ರಿಂದ 1947 ರ ವರೆಗಿನ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ್ದರು ಎಂದು ವಿವರಿಸಿದರು.

ಕಿತ್ತೂರು ಉತ್ಸವದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸಲಿರುವ ಜ್ಯೋತಿಯಾತ್ರೆಯು ಅಕ್ಟೋಬರ್ 23 ರಂದು ಚನ್ನಮ್ಮನ ಕಿತ್ತೂರು ತಲುಪಲಿದೆ.

ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ‌ಶಿವಕುಮಾರ್, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಕಿತ್ತೂರು ಶಾಸಕರಾದ ಬಾಬಾಸಾಹೇಬ್ ಪಾಟೀಲ ಉಪಸ್ಥಿತರಿದ್ದರು

About The Author