WhatsApp Group
Join Now
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ಯಲ್ಲಮ್ಮನ ದೇವಸ್ಥಾನದ ಹುಂಡಿಯಲ್ಲಿ ಕಳೆದ ಮೂರು ತಿಂಗಳಲ್ಲಿ 3.68 ಕೋಟಿ ರೂ. ನಗದು ಕಾಣಿಕೆ ಸಂಗ್ರಹವಾಗಿದೆ.
ಪ್ರತಿಬಾರಿ ಎಣಿಕೆ ನಡೆದಾಗ ರೂ. 1 ಕೋಟಿಯಿಂದ ರೂ. 1.5 ಕೋಟಿಯವರೆಗೆ ಕಾಣಿಕೆ ಸಂಗ್ರಹವಾಗುತ್ತಿತ್ತು. ಆದರೆ, ಈ ಬಾರಿ 3.68 ರೂ. ಕೋಟಿ ಸಂಗ್ರಹವಾಗಿದ್ದು ದಾಖಲೆಯಾಗಿದೆ.
2024 ರ ಡಿಸೆಂಬರ್ 14 ರಿಂದ 2025 ರ ಮಾರ್ಚ್ 12 ರವರೆಗೆ(89ದಿನ) ಯಲ್ಲಮ್ಮ ದೇವಸ್ಥಾನ ಮತ್ತು ಇತರೆ ಪರಿವಾರದ ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾದ ಹಣ ಇದಾಗಿದೆ. ಇದಲ್ಲದೇ, ರೂ. 20.82 ಲಕ್ಷ ಮೌಲ್ಯದ ಚಿನ್ನಾಭರಣ, ರೂ. 6.39 ಲಕ್ಷ ಮೌಲ್ಯದ ಬೆಳ್ಳಿ ಆಭರಣಗಳನ್ನು ಭಕ್ತರು ಕಾಣಿಕೆ ಸಮರ್ಪಿಸಿದ್ದಾರೆ.