ಬಸವಣ್ಣನವರು ಕರ್ನಾಟಕದ ಸಾಂಸ್ಕೃತಿಕ ನಾಯಕ
ಸಾಮಾಜಿಕ ನ್ಯಾಯದ ಮೊದಲ ಹರಿಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಸಚಿವ ಸಂಪುಟದಲ್ಲಿ ತೀರ್ಮಾನಿಸಿದೆ. ಇದು ಕೇವಲ ಘೋಷಣೆ ಅಲ್ಲ, ಬಸವ ತತ್ವದ ಮೇಲಿರುವ ನಮ್ಮ ನಂಬಿಕೆ ಮತ್ತು ಬದ್ದತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು ಈ ಸಂದರ್ಭದಲ್ಲಿ ಮಾತನಾಡಿದ ಅವರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕೆಂದು ನಾಡಿನ ಲಿಂಗಾಯತ ಮಠಗಳ ಸ್ವಾಮಿಗಳು ನನ್ನ ಬಳಿ ಬಂದು ಮನವಿ ಮಾಡಿದ್ದರು. ಇದು ವೈಯಕ್ತಿಕವಾಗಿ ನನ್ನ ಅಪೇಕ್ಷೆಯೂ ಆಗಿತ್ತು. ಸ್ವಾಮಿಗಳ ಈ ಬೇಡಿಕೆಯನ್ನು ಈಡೇರಿಸಿದ…