
ವಿಧಾನಸಭೆಯಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಅಂಗೀಕಾರ
ಬೆಂಗಳೂರು, ಫೆ.15: ವಿಧಾನಮಂಡಲ ಬಜೆಟ್ ಅಧಿವೇಶನದ ಐದನೇ ದಿನವಾದ ಇಂದೂ ಕೂಡ ಸದನದಲ್ಲಿ ಕಲಾಪ ಮುಂದುವರೆದಿದೆ. ಹಲವು ವಿಚಾರಗಳ ಬಗ್ಗೆ ವಿಪಕ್ಷ ಹಾಗೂ ಪ್ರತಿಪಕ್ಷ ನಡುವೆ ಆರೋಪ ಪ್ರತ್ಯಾರೋಪಕ್ಕೆ ಸದನ ಸಾಕ್ಷಿಯಾಗಿದೆ. ಸದ್ಯ ವಿಧಾನಸಭೆ ಕಲಾಪದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ ಅಂಗೀಕಾರವಾಗಿದೆ. ಸುಗ್ರೀವಾಜ್ಞೆಯನ್ನು (Kannada signage ordinance) ರಾಜ್ಯಪಾಲರು ವಾಪಸಾತಿ ಮಾಡಿ ಸದನದಲ್ಲಿ ವಿಧೇಯಕ ಮಂಡಿಸುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ವಿಧೇಯಕ ಮಂಡಿಸಿ ಸರ್ಕಾರ ಅಂಗೀಕಾರ ಪಡೆದಿದೆ. ಅಂಗಡಿ-ಮುಂಗಟ್ಟುಗಳ ಮುಂದೆ ಸೂಚನಾ ಫಲಕಗಳಲ್ಲಿ ಶೇ…