
ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ಹಳಿಗೆ ಹಾರಿ ಯುವಕ ಆತ್ಮಹತ್ಯೆ
ಬೆಂಗಳೂರು: ನಮ್ಮ ಮೆಟ್ರೋ (Namma Metro) ಟ್ರ್ಯಾಕ್‌ಗೆ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ದುರದೃಷ್ಟವಶಾತ್ ಮೆಟ್ರೋ ರೈಲಿಗೆ ಸಿಲುಕಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ತಿಳಿದಬಂದಿದೆ. ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಟ್ರೈನ್ ಬರುವಾಗ ಹಳಿಗೆ ಜಿಗಿದು ಪ್ರಾಣಕಳೆದುಕೊಂಡಿದ್ದಾನೆ. ಮೃತ ಯುವಕ ಯಾರು? ಯಾಕಾಗಿ ಆತ್ಮಹತ್ಯೆ ಮಾಡಿಕೊಂಡ ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ…