
ಕನ್ನಡ ಚಿತ್ರರಂಗದ ನಿರ್ದೇಶಕ ಗುರುಪ್ರಸಾದ್ ಬೆಂಗಳೂರಿನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ
ಬೆಂಗಳೂರು: ಸ್ಯಾಂಡಲ್‌ವುಡ್‌ನ ನಿರ್ದೇಶಕ ಮತ್ತು ನಟ Guru Prasad (52) ಅವರು ಉತ್ತರ ಬೆಂಗಳೂರಿನ ದಾಸನಪುರದ ಅಪಾರ್ಟ್‌ಮೆಂಟ್‌ನಲ್ಲಿ ಭಾನುವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಮಠ, ಎದ್ದೇಳು ಮಂಜುನಾಥ, ಚಿತ್ರಗಳ ಮೂಲಕ ಖ್ಯಾತರಾಗಿರುವ ಕನ್ನಡ ಚಲನಚಿತ್ರ ನಿರ್ದೇಶಕ ಗುರುಪ್ರಸಾದ್ ಅವರು ಬೆಂಗಳೂರಿನ ಉತ್ತರ ಹೊರವಲಯದಲ್ಲಿರುವ ಖಾಸಗಿ ಅಪಾರ್ಟ್‌ಮೆಂಟ್‌ನ ಫ್ಲಾಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದ್ದಾರೆ. ಒಳಗಿನಿಂದ ಬೀಗ ಹಾಕಲಾಗಿದ್ದ ಅವರ ಫ್ಲಾಟ್‌ನಿಂದ ದುರ್ವಾಸನೆ ಬರಲಾರಂಭಿಸಿದ ಹಿನ್ನೆಲೆಯಲ್ಲಿ ಅಪಾರ್ಟ್‌ಮೆಂಟ್‌ನಲ್ಲಿದ್ದ ಅವರ ನೆರೆಹೊರೆಯವರು ಭಾನುವಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು…