
WhatsApp Group
Join Now
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಿನಿ ವಿಧಾನಸೌಧದಲ್ಲಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ “ ಕನ್ನಡ
ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ’ಯನ್ನು ತಾಲೂಕ ಆಡಳಿತ ಹಾಗೂ ವಿವಿಧ ಸಂಘಟನೆಗಳಿಂದ ಅದ್ದೂರಿಯಿಂದ ಸ್ವಾಗತಿಸಿ
ಪೂಜಾ ಕಾರ್ಯಕ್ರಮ ನೆರವೇರಿಸಿ ಮುಖ್ಯ ರಸ್ತೆಯ ಮೂಲಕವಾಗಿ ಕುಂಭ ಮೇಳ ಮೆರವಣಿಗೆಯೊಂದಿಗೆ ಸಂಗೋಳ್ಳಿ ರಾಯಣ್ಣ ವೃತ್ತದವರೆಗೆ ಸಾಗಿ ಬಿಳ್ಕೊಟ್ಟರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಪ್ರದೀಪ್ ಪಟ್ಟಣ, ತಾಲೂಕು ದಂಡಾಧಿಕಾರಿಗಳಾದ ಪ್ರಕಾಶ ಹೊಳೆಪ್ಪಗೋಳ, ತಾಲೂಕು ಪಂಚಾಯತಿ ಇಒ ಪ್ರವೀಣಕುಮಾರ್ ಸಾಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್ ಟಿ ಬಳಿಗಾರ, ಪುರಸಭೆ ಮುಖ್ಯಾಧಿಕಾರಿ ಐ ಕೆ ಗುಡದಾರಿ, ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ಶಂಕರ್ ಕುಂಬಾರ್, ಸಿಬ್ಬಂದಿ ವರ್ಗದವರು, ಶಾಲೆಯ ಶಿಕ್ಷಕರು, ಶಿಕ್ಷಕಿಯರು, ವಿದ್ಯಾರ್ಥಿನಿಯರು ವಿದ್ಯಾರ್ಥಿಗಳು ಹಾಗೂ ರಾಮದುರ್ಗ ತಾಲೂಕಿನ ವಿವಿಧ ಸಂಘಟನೆಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.