WhatsApp Group
Join Now
ಚಾಮಾಜನಗರ: ತಾಲ್ಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ಮಂಗಳವಾರ (ಮಾರ್ಚ್.25) ಪಡಿತರ ಅಕ್ಕಿಯನ್ನು ಅಕ್ರಮವಾಗಿ ಖರೀದಿಸಿ ಸಂಗ್ರಹಿಸಿಟ್ಟಿದ್ದ ಗೋದಾಮಿನ ಮೇಲೆ ಆಹಾರ ಇಲಾಖೆ ಮತ್ತು ಪಟ್ಟಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ 2 ಟನ್ಗೂ ಅಧಿಕ ಅಕ್ಕಿ ವಶಕ್ಕೆ ಪಡೆದ ಘಟನೆ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಹಿಂಭಾಗದಲ್ಲಿ ನಡೆದಿದೆ.
ಈ ಕುರಿತು ಗ್ರಾಮಾಂತರ ಪ್ರದೇಶದಲ್ಲಿನ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಆಧಾರದ ಮೇಲೆ ಅಕ್ಕಿ ಖರೀದಿಸಿದ ಗೋಡಾಮಿನ ಮೇಲೆ ಪರಿಶೀಲನೆ ನಡೆಸಿದ್ದು, ಸುಮಾರು 2,200 ಕೆ.ಜಿ.ಗೂ ಅಧಿಕ ಪಡಿತರ ಅಕ್ಕಿ ವಶ ಪಡಿಸಿಕೊಂಡಿದ್ದಾರೆ.
ಗ್ರಾಮಾಂತರ ಪ್ರದೇಶದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.