
ಬೆಂಗಳೂರು ನಗರ ಪಂಚಮಸಾಲಿ ಸಂಘದ ಅಧ್ಯಕ್ಷರಾದ ಆನಂದ್ ಬಿರಾದಾರ್ ಅವರ ನೇತೃತ್ವದಲ್ಲಿ ಇಂದು ರಾಜಾಜಿನಗರದ ರಾಷ್ಟ್ರೀಯ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಕಚೇರಿಯಲ್ಲಿ ತುರ್ತು ಸುದ್ದಿಗೋಷ್ಟಿ ಕರೆಯಲಾಗಿತ್ತು. ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಲಿ ಬಿಜೆಪಿ ಪಕ್ಷದ ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ ಎ ಎಸ್ ಪಾಟೀಲ್ ನಡಹಳ್ಳಿ ಅವರು ಪಂಚಮ ಸಾಲಿ ಸಮುದಾಯದ ಪ್ರಥಮ ಜಗದ್ಗುರು ಶ್ರೀ ಶ್ರೀ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರ ಬಗ್ಗೆ ಕೀಳಾಗಿ ಮಾತನಾಡಿ ಸ್ವಾಮೀಜಿ ಅವರ ಬಗ್ಗೆ ಉಡಾಫೆ ಹೇಳಿಕೆ ನೀಡಿ ಅವರು ವ್ಯಕ್ತಿತ್ವಕ್ಕೆ ಧಕ್ಕೆ ತಂದಿದ್ದಾರೆ. ಇದರಿಂದ ಸ್ವಾಮೀಜಿಗಳ ಲಕ್ಷಾಂತರ ಅನುಯಾಯಿಗಳು ಹಾಗೂ ಭಕ್ತರ ಮನಸ್ಸಿಗೆ ಘಾಸಿಯಾಗಿದ್ದು, ಕೂಡಲೇ ಎ ಎಸ್ ಪಾಟೀಲ್ ನಡಹಳ್ಳಿ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಸಮಾಜದ ವತಿಯಿಂದ ಅವರ ರಾಜಕೀಯ ಜೀವನವನ್ನು ಶಾಶ್ವತವಾಗಿ ವಿಶ್ರಾಂತಿ ನೀಡಲಾಗುವುದು ಎಂದು ಹೇಳಿದರು. ಇಷ್ಟೊಂದು ಕೀಳುಮಟ್ಟದ ಹೇಳಿಕೆ ನೀಡುವ ನಡಹಳ್ಳಿ ಅವರಿಗೆ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದ್ದಾರೆ ಜೊತೆಗೆ ಸ್ವಾಮೀಜಿ ಬಗ್ಗೆ ತಿಳುವಳಿಕೆ ಕಡಿಮೆ ಇದೆ ಅದಕ್ಕೆ ಈ ರೀತಿ ಹೇಳಿಕೆ ನೀಡಿದ್ದಾರೆ. ಇನ್ನು ಈ ಹೇಳಿಕೆಯಿಂದ ಸಮಾಜದ ಜನರು ಜಾಗೃತರಾಗಿ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಆನಂದ್ ಬಿರಾದಾರ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ನಗರ ಪಂಚಮಸಾಲಿ ಪ್ರಧಾನ ಕಾರ್ಯದರ್ಶಿ ಪುಟ್ಟರಾಜು ಹಳ್ಳದ, ಮುಖಂಡರಾದ ಕಾಂತೇಶ ತುಂಬಗಿ, ಮಲ್ಲನಗೌಡ ಪಾಟೀಲ್, ಗಿರಿಧರ್ ,ಅಮರೇಶ ಅವಟಿ,ದಾನಪ್ಪಾಗೌಡರ್, ಸದಾಶಿವ,ರವಿ,ಸೇರಿದಂತೆ ಹಲವು ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.